ಜಮ್ಮು-ಕಾಶ್ಮೀರ: ಶ್ರೀನಗರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ; ಇಬ್ಬರು ಉಗ್ರರು ಹತ

 ಶ್ರೀನಗರದ ಹೊರವಲಯದಲ್ಲಿ ಸೋಮವಾರ ನಡೆದ ಶೋಧ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

Published: 17th May 2021 11:03 AM  |   Last Updated: 17th May 2021 01:58 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಶ್ರೀನಗರ: ಶ್ರೀನಗರದ ಹೊರವಲಯದಲ್ಲಿ ಸೋಮವಾರ ನಡೆದ ಶೋಧ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿಯನ್ನಾಧರಿಸಿ ಸೋಮವಾರ ಮುಂಜಾನೆ ನಗರದ ಹೊರ ವಲಯದ ಖಾನ್‍ಮೊ ಪ್ರದೇಶದಲ್ಲಿ ರಾಷ್ಟ್ರೀಯ ರೈಫಲ್ಸ್‍, ಜಮ್ಮು-ಕಾಶ್ಮೀರ ಪೊಲೀಸ್ ನ ವಿಶೇಷ ಕಾರ್ಯಾಚರಣೆ ತಂಡ ಹಾಗೂ ಸಿಆರ್ ಪಿಎಫ್ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿದ್ದವು.

ಈ ಪ್ರದೇಶಕ್ಕೆ ಸಾಗುವ ಮತ್ತು ನಿರ್ಗಮಿಸುವ ಎಲ್ಲ ರಸ್ತೆಗಳನ್ನು ಮುಚ್ಚಿ, ನಿರ್ದಿಷ್ಟ ಸ್ಥಳದತ್ತ ಭದ್ರತಾ ಪಡೆಗಳು ಸಾಗುತ್ತಿದ್ದಾಗ ಉಗ್ರರು ಗುಂಡು ಹಾರಿಸಿದ್ದು, ಇದರಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡು ಹಾರಿಸಿದಾಗ ಪರಸ್ಪರ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಈವರೆಗೆ ಇಬ್ಬರು ಉಗ್ರರು ಹತರಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp