ದೆಹಲಿಯಲ್ಲಿ 42 ದಿನಗಳ ನಂತರ ಇದೇ ಮೊದಲ ಸಲ 5 ಸಾವಿರಕ್ಕಿಂತ ಕಡಿಮೆ ಕೊರೋನಾ ಪ್ರಕರಣ!

ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ 4,524 ಹೊಸ ಕೋವಿಡ್ -19 ಪ್ರಕರಣಗಳು ದೃಢಪಟ್ಟಿದ್ದು, 340 ಸೋಂಕಿತರುಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರ ಶೇ. 8.42ಕ್ಕೆ ಕುಸಿತಗೊಂಡಿದೆ.ದೆಹಲಿ ಸರ್ಕಾರದಿಂದ ಬಿಡುಗಡೆಯಾಗಿರುವ ಹೆಲ್ತ್ ಬುಲೆಟಿನ್ ನಲ್ಲಿ ಈ ಮಾಹಿತಿ ನೀಡಲಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ 4,524 ಹೊಸ ಕೋವಿಡ್ -19 ಪ್ರಕರಣಗಳು ದೃಢಪಟ್ಟಿದ್ದು, 340 ಸೋಂಕಿತರು
ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರ ಶೇ. 8.42ಕ್ಕೆ ಕುಸಿತಗೊಂಡಿದೆ.ದೆಹಲಿ ಸರ್ಕಾರದಿಂದ ಬಿಡುಗಡೆಯಾಗಿರುವ ಹೆಲ್ತ್ ಬುಲೆಟಿನ್ ನಲ್ಲಿ ಈ ಮಾಹಿತಿ ನೀಡಲಾಗಿದೆ. 

ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ಸಂಖ್ಯೆ ಹಾಗೂ ಪಾಸಿಟಿವಿಟಿ ದರದಲ್ಲಿ  ನಿರಂತರವಾಗಿ
ಕುಸಿತವಾಗುತ್ತಿದ್ದು, ಕೋವಿಡ್-19 ಪರಿಸ್ಥಿತಿ ಸುಧಾರಿಸಿದೆ. ಸಾಂಕ್ರಾಮಿಕದ ಎರಡನೇ ಅಲೆ ನಡುವೆಯೂ ಪ್ರಕರಣಗಳ
ಇಳಿಕೆಯಲ್ಲಿ ಲಾಕ್ ಡೌನ್ ಪ್ರಮುಖವಾದ ಪಾತ್ರವನ್ನು ನಿರ್ವಹಿಸಿದೆ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಆದಾಗ್ಯೂ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ , ಮೇ 24ರವರೆಗೂ ಲಾಕ್ ಡೌನ್ ವಿಸ್ತರಿಸಿದ್ದಾರೆ. ಕೋವಿಡ್-19 ತಡೆಗಟ್ಟಲು
ಇಲ್ಲಿಯವರೆಗೂ ಪಡೆದಿರುವ ಲಾಭಗಳನ್ನು ಈಗ ಲಾಕ್ ಡೌನ್ ಸಡಿಲತೆಯಿಂದ ಕಳೆದುಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ.

ಏಪ್ರಿಲ್ 5ರ ನಂತರ ಕಡಿಮೆ ಸೋಂಕು ಪ್ರಕರಣಗಳು ವರದಿಯಾಗಿವೆ. ಅಂದು 3548 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಆದಾಗ್ಯೂ,
ಭಾನುವಾರ 53,756 ಕಡಿಮೆ ಸಂಖ್ಯೆಯಲ್ಲಿ ಪರೀಕ್ಷೆ ನಡೆಸಿರುವುದರಿಂದ ಸೋಮವಾರ ಬಂದಿರುವ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ
ಇಳಿಕೆಯಾಗಿದೆ ಎನ್ನಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com