ಸಿಂಗಾಪುರ ವಿಮಾನ ಸೇವೆ ರದ್ದುಗೊಳಿಸಿ: ಕೇಂದ್ರಕ್ಕೆ ದೆಹಲಿ ಸಿಎಂ ಕೇಜ್ರೀವಾಲ್‌ ಮನವಿ

ಸಿಂಗಾಪುರದಲ್ಲಿ ಪತ್ತೆಯಾಗಿರುವ ಹೊಸ ಕೋವಿಡ್‌-19 ಮಕ್ಕಳಿಗೆ "ಅತ್ಯಂತ ಅಪಾಯಕಾರಿ" ಎಂದು ಹೇಳಲಾಗುತ್ತಿರುವುದರಿಂದ ಅಲ್ಲಿಂದ ಆಗಮಿಸುವ ವಿಮಾನ ಸೇವೆಗಳನ್ನು ತಕ್ಷಣದಿಂದ ರದ್ದುಗೊಳಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನವದೆಹಲಿ: ಸಿಂಗಾಪುರದಲ್ಲಿ ಪತ್ತೆಯಾಗಿರುವ ಹೊಸ ಕೋವಿಡ್‌-19 ಮಕ್ಕಳಿಗೆ "ಅತ್ಯಂತ ಅಪಾಯಕಾರಿ" ಎಂದು ಹೇಳಲಾಗುತ್ತಿರುವುದರಿಂದ ಅಲ್ಲಿಂದ ಆಗಮಿಸುವ ವಿಮಾನ ಸೇವೆಗಳನ್ನು ತಕ್ಷಣದಿಂದ ರದ್ದುಗೊಳಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ಕುರಿತು ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ದೆಹಲಿ ಸಿಎಂ, ಸಿಂಗಾಪುರದಲ್ಲಿ ಪತ್ತೆಯಾಗಿರುವ ಹೊಸ ರೂಪಾಂತರಿ ಕರೋನಾ ಮಕ್ಕಳಿಗೆ ಅತ್ಯಂತ ಅಪಾಯಕಾರಿ ಎಂದು ಹೇಳಲಾಗುತ್ತಿದೆ. ಭಾರತದಲ್ಲಿ ಇದು ಮೂರನೇ ಅಲೆಯಾಗಿ ಬರಬಹುದು" ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

"ಕೇಂದ್ರ ಸರ್ಕಾರಕ್ಕೆ ನನ್ನ ಮನವಿ: 1. ಸಿಂಗಪುರದೊಂದಿಗಿನ ವಾಯು ಸೇವೆಗಳನ್ನು ತಕ್ಷಣದಿಂದ ರದ್ದುಗೊಳಿಸಬೇಕು.
2. ಮಕ್ಕಳಿಗೆ ಲಸಿಕೆ ಪರ್ಯಾಯಗಳ ಬಗ್ಗೆ ಆದ್ಯತೆಯ ಆಧಾರದ ಮೇಲೆ ಕೆಲಸ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com