ಕೋವಿಡ್-19: ಒಡಿಶಾದಲ್ಲಿ ಲಾಕ್ ಡೌನ್ ಜೂನ್ 1 ರವರೆಗೆ ವಿಸ್ತರಣೆ

ಒಡಿಶಾದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕೊರೋನಾ ವೈರಸ್ ಅಪಾಯಕಾರಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಲಾಕ್‌ಡೌನ್ ಅನ್ನು ಇನ್ನೂ ಎರಡು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಭುವನೇಶ್ವರ: ಒಡಿಶಾದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕೊರೋನಾ ವೈರಸ್ ಅಪಾಯಕಾರಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಲಾಕ್‌ಡೌನ್ ಅನ್ನು ಇನ್ನೂ ಎರಡು ವಾರಗಳವರೆಗೆ ಅಂದರೆ ಜೂನ್ 1 ರ ಬೆಳಗ್ಗೆ 5 ಗಂಟೆಯವರೆಗೆ ವಿಸ್ತರಿಸಿದೆ.

ಕಳೆದ 15 ದಿನಗಳಲ್ಲಿ ಪಾಸಿಟಿವ್ ಪ್ರಕರಣಗಳನ್ನು ಗಮನಿಸಿದ ನಂತರ ಲಾಕ್‌ಡೌನ್ ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುರೇಶ್ ಚಂದ್ರ ಮಹಾಪಾತ್ರ ತಿಳಿಸಿದ್ದಾರೆ.

ಲಾಕ್‌ಡೌನ್ ಸಮಯದಲ್ಲಿ ರಾಜ್ಯದಲ್ಲಿ ಪಾಸಿಟಿವ್ ಪ್ರಮಾಣ ಸ್ಥಿರವಾಗಿದ್ದರೂ, ಛತ್ತೀಸ್‌ಗಢ ಗಡಿಯಲ್ಲಿರುವ ಕೆಲವು ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಪಶ್ಚಿಮ ಒಡಿಶಾ ಜಿಲ್ಲೆಗಳಿಗೆ ಸೋಂಕು ಹರಡುವಿಕೆ ತಡೆಯಲಾಗಿದೆ ಎಂದಿದ್ದಾರೆ.

"ಈ ಬದಲಾದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಲಾಕ್ ಡೌನ್ ಅವಧಿಯನ್ನು ಇನ್ನೂ ಎರಡು ವಾರಗಳವರೆಗೆ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಾರಾಂತ್ಯದ  ಲಾಕ್ ಡೌನ್ ಸಹ ಮುಂದುವರಿಯುತ್ತದೆ” ಮಹಾಪಾತ್ರ ಹೇಳಿದರು.

ಈ ಬಾರಿ ಮತಷ್ಟು ಕಠಿಣ ನಿರ್ಬಂಧಗಳನ್ನು ವಿಧಿಸಲಾಗಿದ್ದು, ರಸ್ತೆ ಬದಿಯ ಮಾರಾಟ ಪ್ರದೇಶಗಳಲ್ಲಿ ಜನ ಕಿಕ್ಕಿರಿದು ಸೇರುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿ ಸಮಯವನ್ನು ಆರು ಗಂಟೆಯಿಂದ ನಾಲ್ಕು ಗಂಟೆಗಳಿಗೆ ಕಡಿತ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com