ಮಕ್ಕಳಿಗೆ ಕೋವ್ಯಾಕ್ಸಿನ್‌ ಪ್ರಯೋಗ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್‌ ನೋಟಿಸ್‌

18 ವರ್ಷದೊಳಗಿನ ಮಕ್ಕಳ ಮೇಲೆ ಕೋವಾಕ್ಸಿನ್ ಕೋವಿಡ್ -19 ಲಸಿಕೆ ಪ್ರಯೋಗಿಸುವ ಸಂಬಂಧ ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.
ಕೋವ್ಯಾಕ್ಸಿನ್
ಕೋವ್ಯಾಕ್ಸಿನ್

ನವದೆಹಲಿ: 18 ವರ್ಷದೊಳಗಿನ ಮಕ್ಕಳ ಮೇಲೆ ಕೋವಾಕ್ಸಿನ್ ಕೋವಿಡ್ -19 ಲಸಿಕೆ ಪ್ರಯೋಗಿಸುವ ಸಂಬಂಧ ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.

ಮಕ್ಕಳ ಮೇಲೆ ಕೋವ್ಯಾಕ್ಸಿನ್ ಪ್ರಯೋಗಿಸಲು ಕೇಂದ್ರ ಸರ್ಕಾರ ಕಳೆದ ವಾರ ಅನುಮತಿ ನೀಡಿತ್ತು. ಆದರೆ, ಇಲ್ಲಿಯವರೆಗೆ ಯಾವುದೇ ಕಂಪನಿಯು ಭಾರತದಲ್ಲಿ ಮಕ್ಕಳ ಮೇಲೆ ಕೋವಿಡ್ -19 ಲಸಿಕೆಯ ಪ್ರಯೋಗಗಳನ್ನು ನಡೆಸಿಲ್ಲ ಮತ್ತು ಅದಕ್ಕೆ ಅಧಿಕೃತ ಅನುಮತಿ ಪಡೆದಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

2-18 ವರ್ಷ ವಯಸ್ಸಿನ ವ್ಯಕ್ತಿಗಳ ಮೇಲೆ ಕೋವಿಡ್-19 ಲಸಿಕೆಯ ಎರಡು ಹಾಗೂ ಮೂರನೇ ಹಂತದ ಪ್ರಯೋಗಗಳನ್ನು ನಡೆಸಲು ಭಾರತ್ ಬಯೋಟೆಕ್(ಕೊವಾಕ್ಸಿನ್ ತಯಾರಕ)ಗೆ ಅನುಮತಿ ನೀಡಿ ಕೇಂದ್ರ ಸರ್ಕಾರದ ಮೇ 13 ರನ್ನು ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ವಕೀಲ ಸಂಜೀವ್ ಕುಮಾರ್ ಅರ್ಜಿ ಸಲ್ಲಿಸಿದ್ದಾರೆ. ಇದು ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯ, ಮತ್ತು ಅವರ ಪ್ರಾಣಹಾನಿಗೆ ಕಾರಣವಾಗಬಹುದು ಎಂದು ಅವರು ಅರ್ಜಿಯಲ್ಲಿ ಆಕ್ಷೇಪಿಸಿದ್ದಾರೆ.

ಆದರೆ, ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ವಿಭಾಗೀಯ ಪೀಠವು ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com