ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 1.6 ಕೋಟಿ ಡೋಸ್ ಕೋವಿಡ್ ಲಸಿಕೆ ಲಭ್ಯವಿದೆ: ಕೇಂದ್ರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 1.60 ಕೋಟಿ ಡೋಸ್ ಕೋವಿಡ್ -19 ಲಸಿಕೆ ಲಭ್ಯವಿದ್ದು, ಮುಂದಿನ ಮೂರು ದಿನಗಳಲ್ಲಿ, ಇನ್ನೂ 2.67 ಲಕ್ಷ ಡೋಸ್‌ಗಳನ್ನು ಪೂರೈಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
Published: 22nd May 2021 01:45 PM | Last Updated: 22nd May 2021 02:49 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 1.60 ಕೋಟಿ ಡೋಸ್ ಕೋವಿಡ್ -19 ಲಸಿಕೆ ಲಭ್ಯವಿದ್ದು, ಮುಂದಿನ ಮೂರು ದಿನಗಳಲ್ಲಿ, ಇನ್ನೂ 2.67 ಲಕ್ಷ ಡೋಸ್‌ಗಳನ್ನು ಪೂರೈಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
ಇದುವರೆಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 21 ಕೋಟಿಗೂ ಹೆಚ್ಚು ಡೋಸ್ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
"ವ್ಯರ್ಥ ಸೇರಿದಂತೆ 2021ರ ಮೇ 21 ರವರೆಗೆ ಸರಾಸರಿ ಆಧರಿಸಿ ಒಟ್ಟು 19,73,61,311 ಡೋಸ್ ಲಸಿಕೆ(ಇಂದು ಬೆಳಿಗ್ಗೆ 8 ಗಂಟೆಗೆ ಲಭ್ಯವಿರುವ ಮಾಹಿತಿಯ ಪ್ರಕಾರ)" ಬಳಸಿಕೊಳ್ಳಲಾಗಿದೆ ಎಂದು ಸಚಿವಾಲಯ ಹೇಳಿದೆ.
"1.60 ಕೋಟಿಗಿಂತಲೂ ಹೆಚ್ಚು ಡೋಸ್ ಲಸಿಕೆ(1,60,13,409) ಇನ್ನೂ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳ ಬಳಿ ಲಭ್ಯವಿದೆ" ಎಂದು ಪ್ರಕಟಣೆ ತಿಳಿಸಿದೆ.
ದೇಶಾದ್ಯಂತ ಕೊರೋನಾ ಎರಡನೇ ಅಲೆಯ ಅಬ್ಬರ ಮುಂದುವರಿದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2.57 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 4,194 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.