ದೇಶಾದ್ಯಂತ ಕಳೆದ 24 ಗಂಟೆಯಲ್ಲಿ ದಾಖಲೆಯ 20.66 ಲಕ್ಷ ಕೊರೋನಾ ಪರೀಕ್ಷೆ: ಕೇಂದ್ರ

ಮಹಾಮಾರಿ ಕೊರೋನಾ ಪತ್ತೆಗಾಗಿ ದೇಶದಲ್ಲಿ ಕಳೆದ 24 ಗಂಟೆಯಲ್ಲಿ ದಾಖಲೆಯ 20.66 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಮಹಾಮಾರಿ ಕೊರೋನಾ ಪತ್ತೆಗಾಗಿ ದೇಶದಲ್ಲಿ ಕಳೆದ 24 ಗಂಟೆಯಲ್ಲಿ ದಾಖಲೆಯ 20.66 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಇನ್ನು ಲಸಿಕೆ ಅಭಿಯಾನದಡಿ ದೇಶದಲ್ಲಿ ಸುಮಾರು 19.33 ಕೋಟಿ ಮಂದಿಗೆ ಕೊರೋನಾ ಲಸಿಕೆ ನೀಡಲಾಗಿದೆ. ತಾತ್ಕಾಲಿಕ ವರದಿಯ ಪ್ರಕಾರ ಶನಿವಾರ ಬೆಳಿಗ್ಗೆ 7 ಗಂಟೆಯವರೆಗೆ ಒಟ್ಟು 19,33,72,819 ಡೋಸ್ ನೀಡಲಾಗಿದೆ.

ಇದರಲ್ಲಿ 97,38,148 ಮಂದಿ ಆರೋಗ್ಯ ಕಾರ್ಯಕರ್ತರು ಮೊದಲು ಡೋಸ್ ಪಡೆದರೆ, 66,91,350 ಮಂದಿ ಆರೋಗ್ಯ ಕಾರ್ಯಕರ್ತರು ಎರಡನೇ ಡೋಸ್ ಪಡೆದಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು 1,14,70,081 ಮಂದಿ ಮುಂಚೂಣಿ ಕಾರ್ಯಕರ್ತರು ಮೊದಲ ಡೋಸ್ ಪಡೆದಿದ್ದರೆ 83,06,020 ಮಂದಿ ಮುಂಚೂಣಿ ಕಾರ್ಯಕರ್ತರು ಎರಡನೇ ಡೋಸ್ ಅನ್ನು ಪಡೆದಿದ್ದಾರೆ. ಅಲ್ಲದೆ 18ರಿಂದ 44 ವರ್ಷದೊಳಗಿನ 92,97,532 ಮಂದಿ ಮೊದಲ ಡೋಸ್ ಪಡೆದಿದಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ. 

45ರಿಂದ 60 ವರ್ಷದೊಳಗೆ ಸುಮಾರು 6,02,11,957 ಮಂದಿ ಮೊದಲ ಡೋಸ್ ಪಡೆದಿದ್ದರೆ 96,84,295 ಮಂದಿ ಎರಡನೇ ಡೋಸ್ ಸಹ ಪಡೆದ್ದಾರೆ. ಇನ್ನು 60 ವರ್ಷ ಮೇಲ್ಪಟ್ಟು 5,56,83,760 ಮಂದಿ ಮೊದಲ ಡೋಸ್ ಪಡೆದಿದ್ದರೆ 1,81,89,676 ಮಂದಿ ಎರಡನೇ ಡೋಸ್ ಅನ್ನು ಪಡೆದಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. 

ಸತತ ನಾಲ್ಕನೇ ದಿನವೂ 20 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗಿದೆ. ಸತತ ಒಂಬತ್ತನೇ ದಿನವೂ ದೈನಂದಿನ ಹೊಸ ಪ್ರಕರಣಗಳನ್ನು ಚೇತರಿಕೆ ಪ್ರಮಾಣ ಮೀರಿಸುತ್ತಲೇ ಇದ್ದು, ಇಂದು 3,57,630 ರೋಗಿಗಳು ಆಸ್ಪತ್ರೆಗಳಿಂದ ಡಿಸ್ಜಾರ್ಜ್ ಆಗಿದ್ದು ಚೇತರಿಕೆ ಸಂಖ್ಯೆ 2,30,70,365ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ಕಳೆದ 24 ಗಂಟೆಯೊಳಗೆ ದೇಶದಲ್ಲಿ 2,57,299 ಹೊಸ ಪ್ರಕರಣಗಳು ದಾಖಲಾಗಿದ್ದು ಸೋಂಕಿತರ ಸಂಖ್ಯೆ 2,62,89,290ಕ್ಕೆ ಏರಿಕೆಯಾಗಿದೆ. ಭಾರತದ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 29,23,400ಕ್ಕೆ ಇಳಿದಿದೆ. ಕಳೆದ ಒಂದು ದಿನದಲ್ಲಿ ಒಟ್ಟು ಸಕ್ರಿಯ ಪ್ರಕರಣದಲ್ಲಿ 1,04,525 ಪ್ರಕರಣಗಳು ಕಡಿಮೆಯಾಗಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com