ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆ; ಇಲ್ಲಿದೆ ಸಂಪೂರ್ಣ ದರ ಪಟ್ಟಿ

ಮೂರು ದಿನಗಳ ಬಿಡುವಿನ ಬಳಿಕ ಮತ್ತೆ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 16 ರಿಂದ 19 ಪೈಸೆ ಮತ್ತು ಡೀಸೆಲ್ ದರ 26 ರಿಂದ 30 ಪೈಸೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಮೂರು ದಿನಗಳ ಬಿಡುವಿನ ಬಳಿಕ ಮತ್ತೆ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 16 ರಿಂದ 19 ಪೈಸೆ ಮತ್ತು ಡೀಸೆಲ್ ದರ 26 ರಿಂದ 30 ಪೈಸೆ ಏರಿಕೆಯಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಭಾನುವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ  ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ. 

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 16 ರಿಂದ 19 ಪೈಸೆ ಮತ್ತು ಡೀಸೆಲ್ ದರ 26 ರಿಂದ 30 ಪೈಸೆ ಏರಿಕೆಯಾಗಿದೆ. ಆ ಮೂಲಕ 2021 ರ ಮೇ 4 ರಿಂದ ತೈಲೋತ್ಪನ್ನಗಳ ದರಗಳು ದೇಶಾದ್ಯಂತ ಹನ್ನೆರಡನೇ ಬಾರಿಗೆ ಏರಿಕೆಯಾದಂತಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 96.37ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 89.18ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 93.27ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 84.13ರೂ ಗೆ ಏರಿಕೆಯಾಗಿದೆ.

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 99.54ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 91.36ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 93.33ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 86.97ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 94.91ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 88.92ರೂ ಗೆ ಏರಿಕೆಯಾಗಿದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com