ಬ್ಲ್ಯಾಕ್ ಫಂಗಸ್ ಅಧಿಸೂಚಿತ ಸಾಂಕ್ರಾಮಿಕ ಕಾಯಿಲೆ: ಉತ್ತರಾಖಂಡ ಸರ್ಕಾರದಿಂದ ಘೋಷಣೆ

ಕರ್ನಾಟಕ, ರಾಜಸ್ಥಾನ, ತೆಲಂಗಾಣ ಮತ್ತು ಆಂಧ್ರ ಪ್ರದೇಶಗಳ ಬಳಿಕ ಇದೀಗ ಉತ್ತರಾಖಂಡ ಸರ್ಕಾರ ಕೂಡ ಬ್ಲ್ಯಾಕ್ ಫಂಗಸ್ ಸೋಂಕನ್ನು ಅಧಿಸೂಚಿತ ಸಾಂಕ್ರಾಮಿಕ ಕಾಯಿಲೆ ಎಂದು ಘೋಷಣೆ ಮಾಡಿದೆ.
ಬ್ಲಾಕ್ ಫಂಗಸ್
ಬ್ಲಾಕ್ ಫಂಗಸ್

ಡೆಹ್ರಾಡೂನ್: ಕರ್ನಾಟಕ, ರಾಜಸ್ಥಾನ, ತೆಲಂಗಾಣ ಮತ್ತು ಆಂಧ್ರ ಪ್ರದೇಶಗಳ ಬಳಿಕ ಇದೀಗ ಉತ್ತರಾಖಂಡ ಸರ್ಕಾರ ಕೂಡ ಬ್ಲ್ಯಾಕ್ ಫಂಗಸ್ ಸೋಂಕನ್ನು ಅಧಿಸೂಚಿತ ಸಾಂಕ್ರಾಮಿಕ ಕಾಯಿಲೆ ಎಂದು ಘೋಷಣೆ ಮಾಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಇಲಾಖೆ ಬ್ಲ್ಯಾಕ್ ಫಂಗಸ್ ಅಧಿಸೂಚಿತ ಸಾಂಕ್ರಾಮಿಕ ಕಾಯಿಲೆಗಳ ಪಟ್ಟಿಗೆ ಸೇರಿಸಲಾಗಿದ್ದು, ಸೂಚಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದೆ. ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವಾಲಯ ಉತ್ತರಾಖಂಡದಲ್ಲಿ ಪ್ರಸ್ತುತ ಒಟ್ಟು 65 ಬ್ಲ್ಯಾಕ್ ಫಂಗಸ್ ಸೋಂಕು ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 61 ಸೋಂಕಿತರನ್ನು ರಿಷಿಕೇಶ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದೆ.

1897 ರ ಕೇಂದ್ರ ಸಾಂಕ್ರಾಮಿಕ ಕಾಯ್ದೆಯಲ್ಲಿ ಕಪ್ಪು ಶಿಲೀಂಧ್ರ ಸೋಂಕನ್ನು ಕೂಡ ಸೇರಿಸಲಾಗಿದ್ದು, ಪ್ರತಿದಿನ ಆಯಾ ಆಸ್ಪತ್ರೆಗಳಲ್ಲಿ ನೋಂದಾಯಿಸಲ್ಪಟ್ಟವರು ಮತ್ತು ಕಪ್ಪು ಶಿಲೀಂಧ್ರದ ಲಕ್ಷಣಗಳು ಕಂಡುಬರುವವರು ಆರೋಗ್ಯ ಇಲಾಖೆಗೆ  ವಿವರಗಳನ್ನು ನೀಡಬೇಕಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. 

ಇನ್ನು ಈ ಹಿಂದೆ ಕರ್ನಾಟಕ, ರಾಜಸ್ಥಾನ ಮತ್ತು ತೆಲಂಗಾಣ ಸರ್ಕಾರಗಳು ಬ್ಲ್ಯಾಕ್ ಫಂಗಸ್ ಅನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಣೆ ಮಾಡಿ ಉಚಿತಿ ಚಿಕಿತ್ಸೆ ನೀಡುತ್ತಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com