'ಬ್ಲ್ಯಾಕ್ ಫಂಗಸ್' ಸಾಂಕ್ರಾಮಿಕ ರೋಗ ಎಂದು ಘೋಷಿಸಿದ ಜಮ್ಮು ಮತ್ತು ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರದಲ್ಲಿ 40 ವರ್ಷದ ವ್ಯಕ್ತಿಯೊಬ್ಬರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಬಲಿಯಾದ ನಂತರ ಲೆಫ್ಟಿನೆಂಟ್ ಗವರ್ನರ್ ಆಡಳಿತ ಕಪ್ಪು ಶಿಲೀಂಧ್ರ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ 40 ವರ್ಷದ ವ್ಯಕ್ತಿಯೊಬ್ಬರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಬಲಿಯಾದ ನಂತರ ಲೆಫ್ಟಿನೆಂಟ್ ಗವರ್ನರ್ ಆಡಳಿತ ಕಪ್ಪು ಶಿಲೀಂಧ್ರ(ಮ್ಯೂಕೋರ್ಮೈಕೋಸಿಸ್) ಅನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿದೆ.

"ಸಾಂಕ್ರಾಮಿಕ ರೋಗಗಳ ಕಾಯ್ದೆ 1897 (1897 ರ ಕಾಯ್ದೆ ಸಂಖ್ಯೆ 3)ರ ಅಡಿಯಲ್ಲಿ, ಜಮ್ಮು ಮತ್ತು ಕಾಶ್ಮಿರ ಸರ್ಕಾರವು ಮ್ಯೂಕೋರ್ಮೈಕೋಸಿಸ್ ಅನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸುತ್ತಿದೆ" ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ.

ಎಲ್ಲಾ ಖಾಸಗಿ ಮತ್ತು ಸರ್ಕಾರಿ ಆರೋಗ್ಯ ಸಂಸ್ಥೆಗಳು ಜಿಲ್ಲಾ ಮಟ್ಟದ ಮುಖ್ಯ ವೈದ್ಯಕೀಯ ಅಧಿಕಾರಿಗಳು ಮತ್ತು ಸಮಗ್ರ ರೋಗಗಳ ಕಣ್ಗಾವಲು ಕಾರ್ಯಕ್ರಮ(ಐಡಿಎಸ್ಪಿ) ಮೂಲಕ ಆರೋಗ್ಯ ಇಲಾಖೆಗೆ ಶಂಕಿತ ಮತ್ತು ಬ್ಲ್ಯಾಕ್ ಫಂಗಸ್ ದೃಢಪಟ್ಟ ಪ್ರಕರಣಗಳನ್ನು ವರದಿ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

"ಜಮ್ಮು / ಕಾಶ್ಮೀರದ ಆರೋಗ್ಯ ಇಲಾಖೆಯ ನಿರ್ದೇಶಕರ ಪೂರ್ವ ಅನುಮತಿಯಿಲ್ಲದೆ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಬ್ಲ್ಯಾಕ್ ಫಂಗಸ್ ಕುರಿತು ಯಾವುದೇ ಮಾಹಿತಿ ಹರಡುವಂತಿಲ್ಲ" ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com