18-44 ವಯೋಮಾನದವರಿಗೆ 1 ಕೋಟಿ ಲಸಿಕೆ ನೀಡಲಾಗಿದೆ, ಮುಂದಿನ ಮೂರು ದಿನಗಳಲ್ಲಿ 48 ಲಕ್ಷ ಡೋಸ್ ಪೂರೈಕೆ: ಕೇಂದ್ರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 1.80 ಕೋಟಿ ಡೋಸ್ ಕೋವಿಡ್ -19 ಲಸಿಕೆ ಲಭ್ಯವಿದ್ದು, ಮುಂದಿನ ಮೂರು ದಿನಗಳಲ್ಲಿ ಮತ್ತೆ 48 ಲಕ್ಷ ಡೋಸ್‌ ಲಸಿಕೆ ನೀಡಲಾಗುವುದು...
ಕೋವಿಡ್-19 ಲಸಿಕೆ
ಕೋವಿಡ್-19 ಲಸಿಕೆ

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 1.80 ಕೋಟಿ ಡೋಸ್ ಕೋವಿಡ್ -19 ಲಸಿಕೆ ಲಭ್ಯವಿದ್ದು, ಮುಂದಿನ ಮೂರು ದಿನಗಳಲ್ಲಿ ಮತ್ತೆ 48 ಲಕ್ಷ ಡೋಸ್‌ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಕೇಂದ್ರ ಸರ್ಕಾರ ಇಲ್ಲಿಯವರೆಗೆ ಉಚಿತವಾಗಿ ಮತ್ತು ನೇರವಾಗಿ ರಾಜ್ಯಗಳ ಖರೀದಿ ವಿಭಾಗದ ಮೂಲಕ 21.80 ಕೋಟಿಗೂ ಹೆಚ್ಚು ಡೋಸ್ ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ವ್ಯರ್ಥ ಸೇರಿದಂತೆ 2021ರ ಮೇ 23 ರವರೆಗೆ ಸರಾಸರಿ ಆಧರಿಸಿ ಒಟ್ಟು 20,00,08,875 ಡೋಸ್ ಲಸಿಕೆ  ಬಳಸಿಕೊಳ್ಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

"1.80 ಕೋಟಿಗಿಂತಲೂ ಹೆಚ್ಚು ಡೋಸ್ ಲಸಿಕೆ(1,80,43,015) ಇನ್ನೂ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳ ಬಳಿ ಲಭ್ಯವಿದೆ" ಎಂದು ಪ್ರಕಟಣೆ ತಿಳಿಸಿದೆ.

"ಇದಲ್ಲದೆ, 48 ಲಕ್ಷಕ್ಕೂ ಹೆಚ್ಚು (48,00,650) ಡೋಸ್ ಲಸಿಕೆಯನ್ನು ಮುಂದಿನ ಮೂರು ದಿನಗಳಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೇಂದ್ರದಿಂದ ಸ್ವೀಕರಿಸಲಿವೆ" ಎಂದು ಅದು ಹೇಳಿದೆ.

ಈ ಮಧ್ಯೆ, ಮೇ 1 ರಿಂದ ಆರಂಭವಾದ 18 ರಿಂದ 44 ವರ್ಷದವರ ಲಸಿಕೆ ಅಭಿಯಾನಕ್ಕೆ ಒಂದು ಕೋಟಿ ಡೋಸ್ ಗಿಂತ ಹೆಚ್ಚು ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com