ಕೋವಿಡ್-19 ಸಂತ್ರಸ್ತರ ಕುಟುಂಬಕ್ಕೆ ಪರಿಹಾರ: ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್ 

`ಕೊರೋನಾ ವೈರಸ್ ನಿಂದ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂಬ ಅರ್ಜಿಯೊಂದಕ್ಕೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ. 
ಕೊರೋನಾದಿಂದ ಮೃತಪಟ್ಟ ವ್ಯಕ್ತಿ (ಸಂಗ್ರಹ ಚಿತ್ರ)
ಕೊರೋನಾದಿಂದ ಮೃತಪಟ್ಟ ವ್ಯಕ್ತಿ (ಸಂಗ್ರಹ ಚಿತ್ರ)

ನವದೆಹಲಿ: `ಕೊರೋನಾ ವೈರಸ್ ನಿಂದ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂಬ ಅರ್ಜಿಯೊಂದಕ್ಕೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ. 

ನ್ಯಾಯಮೂರ್ತಿ ಅಶೋಕ್ ಭೂಷಣ್ ಹಾಗೂ ಎಂಆರ್ ಶಾ ಅವರಿದ್ದ ಕೋರ್ಟ್ ನ ರಜೆ ಪೀಠ, ಕೋವಿಡ್-19 ಸಂತ್ರಸ್ತರಿಗೆ ನೀಡಲಾಗುತ್ತಿರುವ ಮರಣ ಪ್ರಮಾಣಪತ್ರದ ಕುರಿತು ಐಸಿಎಂಆರ್ ಮಾರ್ಗಸೂಚಿಗಳನ್ನು ಹಾಜರುಪಡಿಸಲು ಕೇಂದ್ರಕ್ಕೆ ಸೂಚನೆ ನೀಡಿದ್ದು, ಈ ರೀತಿ ಮರಣ ಪ್ರಮಾಣಪತ್ರಗಳನ್ನು ನೀಡುವುದರಲ್ಲಿ ಏಕರೂಪ ನೀತಿ ಹೊಂದಿರಬೇಕೆಂದು ಹೇಳಿದೆ. 

ಮರಣ ಪ್ರಮಾಣಪತ್ರಗಳನ್ನು ನೀಡುವುದರಲ್ಲಿ ಏಕರೂಪ ನೀತಿಗೆ ಹಾಗೂ ಕೋವಿಡ್-19 ನಿಂದ ಮೃತಪಟ್ಟವರಿಗೆ 4 ಲಕ್ಷ ರೂಪಾಯಿಗಳನ್ನು 2005 ರ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೊರೋನಾ ಸಂತ್ರಸ್ತರಿಗೆ 4 ಲಕ್ಷ ರೂಪಾಯಿಗಳನ್ನು ನೀಡುವಂತೆ ಕೋರಿ ಪ್ರತ್ಯೇಕವಾಗಿ ಸಲ್ಲಿಸಲಾಗಿದ್ದ 2 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿತ್ತು. 

ಮರಣ ಪ್ರಮಾಣಪತ್ರಗಳ ವಿಷಯದಲ್ಲಿ ಏಕರೂಪ ನೀತಿ ಅನುಸರಿಸದೇ ಇದ್ದಲ್ಲಿ ಸಂತ್ರಸ್ತರ ಕುಟುಂಬಗಳಿಗೆ ಕೋವಿಡ್-19 ನಿಂದ ಪರಿಹಾರ ಪಡೆಯುವುದು ಹಾಗೂ ಇತರ ಪ್ರಯೋಜನಗಳನ್ನು ಪಡೆಯುವುದು ಕಷ್ಟವಾಗಲಿದೆ ಎಂದು ಕೋರ್ಟ್ ಹೇಳಿದ್ದು ಜೂ.11ಕ್ಕೆ ವಿಚಾರಣೆಯನ್ನು ಮುಂದೂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com