3ನೇ ಅಲೆಗೂ ಮುನ್ನ ಎಲ್ಲಾ ಪೋಷಕರಿಗೂ ಲಸಿಕೆ ನೀಡಲು ಯೋಗಿ ಸರ್ಕಾರದ ಯೋಜನೆ

ದೇಶಾದ್ಯಂತ ಕೊರೋನಾದ 2 ನೇ ಅಲೆ ಕಡಿಮೆಯಾಗುತ್ತಿರುವ ಲಕ್ಷಣಗಳು ಗೋಚರಿಸುತ್ತಿರುವಾಗಲೇ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ 3 ನೇ ಅಲೆಯನ್ನು ಎದುರಿಸಲು ಸಿದ್ಧತೆ ನಡೆಸಿದೆ.  
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಲಖನೌ: ದೇಶಾದ್ಯಂತ ಕೊರೋನಾದ 2 ನೇ ಅಲೆ ಕಡಿಮೆಯಾಗುತ್ತಿರುವ ಲಕ್ಷಣಗಳು ಗೋಚರಿಸುತ್ತಿರುವಾಗಲೇ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ 3 ನೇ ಅಲೆಯನ್ನು ಎದುರಿಸಲು ಸಿದ್ಧತೆ ನಡೆಸಿದೆ. 

3 ನೇ ಅಲೆಗೂ ಮುನ್ನ ಎಲ್ಲಾ ಪೋಷಕರಿಗೂ ಲಸಿಕೆ ನೀಡಲು ಸರ್ಕಾರ ಯೋಜನೆ ರೂಪಿಸಿದ್ದು, ಪ್ರತಿ ಜಿಲ್ಲೆಯಲ್ಲೂ ಇದಕ್ಕಾಗಿ ವಿಶೇಷ ಬೂತ್ ಗಳನ್ನು ಸ್ಥಾಪಿಸಲು ನಿರ್ಧರಿಸಿದೆ. 

ಈ ನಿಟ್ಟಿನಲ್ಲಿ ಸೂಕ್ತ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಶಿಶುಗಳಿರುವ ಪೋಷಕರಿಗೆ ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಅವಕಾಶ ಮಾಡಿಕೊಡಬೇಕೆಂದು ಸೂಚನೆ ನೀಡಲಾಗಿದೆ. 

ಇದನ್ನು ಅಭಿಯಾನದ ಮಾದರಿಯಲ್ಲಿ ನಡೆಸಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಹೆಚ್ಚಿನ ಸಮಸ್ಯೆ ಹೊಂದಿರಲಿದೆ ಎಂದು ವಿಶ್ಲೇಷಿಸಲಾಗುತ್ತಿರುವುದರಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ. 

ಮಕ್ಕಳೊಂದಿಗೆ ಪೋಷಕರು ನಿಕಟವಾಗಿರುತ್ತಾರೆ ಆದ್ದರಿಂದ ಮೂರನೇ ಅಲೆ ಎದುರಾಗುವುದಕ್ಕೂ ಮುನ್ನ ಮಕ್ಕಳ ಪೋಷಕರಿಗೆ ಲಸಿಕೆ ನೀಡುವುದು ಮುಖ್ಯವೆಂದು ಸರ್ಕಾರ ನಿರ್ಧರಿಸಿರುವುದಾಗಿ ಸರ್ಕಾರದ ವಕ್ತಾರರು ಹೇಳಿದ್ದಾರೆ. ರಾಜ್ಯದ 23 ಜಿಲ್ಲೆಗಳಲ್ಲಿ ಈಗ 18-44 ವಯಸ್ಸಿನವರಿಗೆ ಲಸಿಕೆಯನ್ನು ನೀಡಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com