ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಆಂಟಿಗುವಾದಿಂದ ನಾಪತ್ತೆ: ವಕೀಲರು

ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ವಂಚಿಸಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಇದೀಗ ಆಂಟಿಗುವಾ ಮತ್ತು ಬಾರ್ಬುಡಾದಿಂದಲೂ ನಾಪತ್ತೆಯಾಗಿದ್ದಾನೆ.
ಮೆಹುಲ್ ಚೋಕ್ಸಿ
ಮೆಹುಲ್ ಚೋಕ್ಸಿ

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ವಂಚಿಸಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಇದೀಗ ಆಂಟಿಗುವಾ ಮತ್ತು ಬಾರ್ಬುಡಾದಿಂದಲೂ ನಾಪತ್ತೆಯಾಗಿದ್ದಾನೆ.

ಮೆಹುಲ್ ಚೋಕ್ಸಿ ನಾಪತ್ತೆಯನ್ನು ಅವರ ಪರ ವಕೀಲ ವಿಜಯ್ ಅಗರ್ ವಾಲ್ ಖಚಿತಪಡಿಸಿದ್ದಾರೆ. ಪತ್ತೆಹಚ್ಚಲು ಪೊಲೀಸರು ಭಾನುವಾರದಿಂದ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಮೆಹುಲ್ ಚೋಕ್ಸಿ ನಾಪತ್ತೆಯಾಗಿದ್ದು, ಅವರ ಕುಟುಂಬಸ್ಥರು ಆತಂಕಗೊಂಡಿದ್ದಾರೆ, ಅವರ ಕುಟುಂಬಸ್ಥರು ಈ ಸಂಬಂಧ ಚರ್ಚಿಸಲು ನನ್ನನ್ನು ಕರೆದಿದ್ದರು, ಕುಟುಂಬವೂ ಈ ಸಂಬಂಧ ತೀವ್ರ ಆತಂಕದಲ್ಲಿದೆ ಎಂದು ವಿಜಯ್ ಅಗರ್ ವಾಲ್ ಎಎನ್ ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ನಿನ್ನೆ ಸಂಜೆ ಮಹುಲ್ ಚೋಕ್ಸಿ ಮನೆಯಿಂದ ತೆರಳಿ ದಕ್ಷಿಣ ಭಾಗದ ಪ್ರಸಿದ್ಧ ರೆಸ್ಟೋರೆಂಟ್ ಗೆ ತೆರಳಿದ್ದರು ಅದಾದ ನಂತರ ಮತ್ತೆ ಅವರು ಕಾಣಸಿಲ್ಲ, ಅವರ ವಾಹನ ಜೊಲ್ಲಿ ಹಾರ್ಬರ್ ನಲ್ಲಿ ಪತ್ತೆಯಾಗಿದ್ದು, ಚೋಕ್ಸಿ ನಾಪತ್ತೆಯಾಗಿದ್ದಾರೆ ಎಂದು ಆಂಟಿಗುವಾ ಮಾಧ್ಯಮಗಳು ವರದಿ ಮಾಡಿವೆ.

ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾ ಮತ್ತು ಬಾರ್ಬುಡಾದ ಪೌರತ್ವವನ್ನು ಪಡೆದಿರುವ ಚೋಕ್ಸಿ ಭಾನುವಾರ ದ್ವೀಪದ ದಕ್ಷಿಣ ಪ್ರದೇಶದಲ್ಲಿ ವಾಹನ ಚಲಾಯಿಸುತ್ತಿರುವುದು ಕಂಡುಬಂದಿತ್ತು. 

ನೀರವ್ ಮೋದಿ ಮತ್ತು ಅವರ ಮಾವ ಚೋಕ್ಸಿ ಸಾರ್ವಜನಿಕ ವಲಯದ ಮುಂಬೈನ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ (ಪಿಎನ್‌ಬಿ) ಸಾವಿರಾರು ಕೋಟಿ ರೂಪಾಯಿ ಸಾಲ ಮರುಪಾವತಿಸದೆ ವಂಚನೆ ಮಾಡಿದ ಆರೋಪ ಕೇಳಿ ಬಂದ ಬಳಿಕ ದೇಶಬಿಟ್ಟು ಪರಾರಿಯಾಗಿದ್ದಾರೆ. ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ನೀರವ್ ಮೋದಿ ಸುಮಾರು 14,500 ರು.ಕೋಟಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com