ಆಲೋಪತಿ ವೈದ್ಯ ಪದ್ಧತಿ ಅವಹೇಳನ: ಬಾಬಾ ರಾಮದೇವ್ ವಿರುದ್ಧ ಕಠಿಣ ಕ್ರಮಕ್ಕೆ ಉತ್ತರಾಖಂಡ್ ಐಎಂಎ ಆಗ್ರಹ

ಆಲೋಪತಿ ವೈದ್ಯರ ವಿರುದ್ಧ ನೀಡಿದ ಹೇಳಿಕೆ ಸಂಬಂಧ ಯೋಗಗುರು ಬಾಬಾ ರಾಮದೇವ್ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಉತ್ತರಾಖಂಡ್ ಐಎಂಎ ಆಗ್ರಹಿಸಿದೆ.
ಬಾಬಾ ರಾಮದೇವ್
ಬಾಬಾ ರಾಮದೇವ್

ಡೆಹ್ರಾಡೂನ್: ಆಲೋಪತಿ ವೈದ್ಯರ ವಿರುದ್ಧ ನೀಡಿದ ಹೇಳಿಕೆ ಸಂಬಂಧ ಯೋಗಗುರು ಬಾಬಾ ರಾಮದೇವ್ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಉತ್ತರಾಖಂಡ್ ಐಎಂಎ ಆಗ್ರಹಿಸಿದೆ.

ಈ ಸಂಬಂಧ ಸೋಮವಾರ ಉತ್ತರಾಖಂಡ್ ಮುಖ್ಯಮಂತ್ರಿಗೆ ಐಎಂಎ ಅಧ್ಯಕ್ಷ ಡಾ.ಅಜಯ್ ಖನ್ನಾ ಪತ್ರ ಬರೆದಿದ್ದು, ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಬಾಬಾ ರಾಮದೇವ್ ಅವರ ಹೇಳಿಕೆಯ ವಿರುದ್ಧ ಐಎಂಎ ವೈದ್ಯರಲ್ಲಿ ಸಾಕಷ್ಟು ಅಸಮಾಧಾನವಿದೆ ಎಂದು ಬರೆಯಲಾಗಿದೆ. ಈ ಹೇಳಿಕೆಯನ್ನು ತಪ್ಪಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿ ಕೇಂದ್ರ ಆರೋಗ್ಯ ಸಚಿವರು ರಾಮದೇವ್ ಅವರಿಗೆ ನೋಟಿಸ್ ಕಳುಹಿಸಿದ್ದಾರೆ ಎಂದು ಡಾ. ಖನ್ನಾ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಬಾಬಾ ರಾಮ್ ದೇವ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಐಎಂಎ ಪರವಾಗಿ ಈಗಾಗಲೇ ರಾಮ್ ದೇವ್ ವಿರುದ್ದ ಮಾನನಷ್ಟ ಮೊಕದ್ದಮೆ ನೋಟಿಸ್ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಮ್ ದೇವ್ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೇ ಶೀಘ್ರವೇ ಮಾನನಷ್ಟ ಮೊಕದ್ದಮೆ ಹೂಡಿ, ಎಫ್ ಐ ಆರ್ ದಾಖಲಿಸಲಾಗುವುದು ಎಂದು ಹೇಳಿದ್ದಾರೆ. ಅಲೋಪಥಿ ಔಷಧಗಳನ್ನು ತೆಗೆದುಕೊಂಡ ಲಕ್ಷಾಂತರ ಮಂದಿ ಸಾವನ್ನಪ್ಪಿದ್ದಾರೆ, ಡಿಸಿಜೆ ಅನುಮೋದನೆ ನೀಡಿರುವ ಔಷಧಗಳಾದ ಫ್ಯಾವಿಫ್ಲೂ ಹಾಗೂ ಇನ್ನಿತರ ಔಷಧಗಳು ಕೋವಿಡ್-19 ಚಿಕಿತ್ಸೆಯಲ್ಲಿ ವಿಫಲಗೊಂಡಿವೆ ಎಂಬ ಅರ್ಥದಲ್ಲಿ ಯೋಗಗುರು ಮಾತನಾಡಿ ನಂತರ ಕ್ಷಮೆ ಕೋರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com