ಟೂಲ್ ಕಿಟ್ ವಿವಾದ: ಇಬ್ಬರು ಕಾಂಗ್ರೆಸ್ ನಾಯಕರಿಗೆ ದೆಹಲಿ ಪೊಲೀಸರಿಂದ ನೊಟೀಸ್

ಕೋವಿಡ್ ಟೂಲ್ ಕಿಟ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಇಬ್ಬರು ಕಾಂಗ್ರೆಸ್ ನಾಯಕರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಜಾರಿಗೊಳಿಸಿದೆ.
ಕಾಂಗ್ರೆಸ್
ಕಾಂಗ್ರೆಸ್

ನವದೆಹಲಿ: ಕೋವಿಡ್ ಟೂಲ್ ಕಿಟ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಇಬ್ಬರು ಕಾಂಗ್ರೆಸ್ ನಾಯಕರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಜಾರಿಗೊಳಿಸಿದೆ.

ಈ ವಿಷಯವಾಗಿ ನೀಡಲಾಗಿದ್ದ ದೂರಿನ ಅನ್ವಯ ಪೊಲೀಸರು ನೊಟೀಸ್ ಜಾರಿಗೊಳಿಸಿದ್ದಾರೆ. ಕಾಂಗ್ರೆಸ್ ನ ಸಾಮಾಜಿಕ ಜಾಲತಾಣದ ಮುಖ್ಯಸ್ಥ ರೋಹನ್ ಗುಪ್ತ ಹಾಗು ಪಕ್ಷದ ವಕ್ತಾರ ಎಂವಿರಾಜೀವ್ ಗೌಡಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಕಳಿಸಲಾಗಿದೆ.

ಕಾಂಗ್ರೆಸ್ ನಿಂದಲೇ ಸಲ್ಲಿಕೆಯಾಗಿದ್ದ ದೂರಿನ ಅನ್ವಯ 8-9 ದಿನಗಳ ಹಿಂದೆಯೇ ನೋಟಿಸ್ ಜಾರಿಗೊಳಿಸಲಾಗಿತ್ತು. ಕೋವಿಡ್ ಟೂಲ್ ಕಿಟ್ ಗೆ ಸಂಬಂಧಿಸಿದ ತನಿಖೆಯಲ್ಲಿ ಸಹಕಾರಿಯಾಗಲೆಂದು ವಿಚಾರಣೆಗೆ ಹಾಜರಾಗಲು ಕೇಳಿದ್ದೆವು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com