ಕೋವಿಡ್-19: ದೇಶಾದ್ಯಂತ ಒಂದೇ ದಿನ 2.08 ಲಕ್ಷ ಹೊಸ ಸೋಂಕು ಪ್ರಕರಣ ವರದಿ, 4,157 ಸಾವು!

ದೇಶಾದ್ಯಂತ ಒಂದೇ ದಿನ 2.08 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 4,157 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶಾದ್ಯಂತ ಒಂದೇ ದಿನ 2.08 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 4,157 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 2,08,921 ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 2,71,57,795ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 4,157 ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ  3,11,388ಕ್ಕೆ ಏರಿಕೆಯಾಗಿದೆ. 

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 2,95,955 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 2,43,50,816 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 24,95,591ಕ್ಕೆ ಕುಸಿದಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ  ನೀಡಿದೆ.

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 22,17,320 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 33,48,11,496ಕ್ಕೆ ಏರಿಕೆಯಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಅಂತೆಯೇ ಈ ವರೆಗೂ 20,06,62,456 ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ  ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com