ನಾರದ ರಹಸ್ಯ ಕಾರ್ಯಾಚರಣೆ ಕೇಸು: ನಾಲ್ಕು ಟಿಎಂಸಿ ನಾಯಕರಿಗೆ ಕೋಲ್ಕತ್ತಾ ಹೈಕೋರ್ಟ್ ಮಧ್ಯಂತರ ಜಾಮೀನು 

ನಾರದ ಸುದ್ದಿವಾಹಿನಿ ರಹಸ್ಯ ಕಾರ್ಯಾಚರಣೆ ಕೇಸಿನಲ್ಲಿ ಕೋಲ್ಕತ್ತಾ ಹೈಕೋರ್ಟ್ ಶುಕ್ರವಾರ ನಾಲ್ವರು ಟಿಎಂಸಿ ನಾಯಕರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೋಲ್ಕತ್ತಾ: ನಾರದ ಸುದ್ದಿವಾಹಿನಿ ರಹಸ್ಯ ಕಾರ್ಯಾಚರಣೆ ಕೇಸಿನಲ್ಲಿ ಕೋಲ್ಕತ್ತಾ ಹೈಕೋರ್ಟ್ ಶುಕ್ರವಾರ ನಾಲ್ವರು ಟಿಎಂಸಿ ನಾಯಕರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 

ವೈಯಕ್ತಿಕ ಬಾಂಡ್ 2 ಲಕ್ಷ ರೂಪಾಯಿ ಮತ್ತು ಇಬ್ಬರು ಶ್ಯೂರಿಟಿಗಳ ಷರತ್ತುಗಳೊಂದಿಗೆ ಕೋಲ್ಕತ್ತಾ ಹೈಕೋರ್ಟ್ ಟಿಎಂಸಿ ನಾಯಕರಾದ ಫಿರ್ಹಾದ್ ಹಕಿಮ್, ಸುಬ್ರತ ಮುಖರ್ಜಿ, ಮದನ್ ಮಿತ್ರ ಮತ್ತು ಸೋವನ್ ಚಟರ್ಜಿ ಅವರಿಗೆ  ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 

ಮುಂದಿನ ದಿನಗಳಲ್ಲಿ ಹೈಕೋರ್ಟ್ ಸೂಚಿಸಿದಾಗಲೆಲ್ಲಾ ಈ ನಾಲ್ವರು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಬೇಕೆಂದು ಕೂಡ ಹೈಕೋರ್ಟ್ ಸೂಚಿಸಿದೆ. ನಾರದಾ ಕೇಸಿನ ಬಾಕಿ ಉಳಿದಿರುವ ವಿಚಾರಣೆ ಇರುವುದರಿಂದ ಮುಂದಿನ ದಿನಗಳಲ್ಲಿ ಈ ನಾಲ್ವರು ಟಿಎಂಸಿ ನಾಯಕರು ಮಾಧ್ಯಮಗಳಿಗೆ ಸಂದರ್ಶನ ಕೂಡ ನೀಡಬಾರದು ಎಂದು ಕೂಡ ಹೈಕೋರ್ಟ್ ಷರತ್ತು ವಿಧಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com