2021 ವರ್ಷಾಂತ್ಯದ ವೇಳೆಗೆ ದೇಶದ ಎಲ್ಲ ಪ್ರಜೆಗಳಿಗೂ ಕೋವಿಡ್ ಲಸಿಕೆ: ಕೇಂದ್ರ ಸರ್ಕಾರ

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಮುಂದುವರೆದಿರುವಂತೆಯೇ ಇತ್ತ ಕೇಂದ್ರ ಸರ್ಕಾರ ಕೋವಿಡ್ ಲಸಿಕೆ ನೀಡಿಕೆ ಕಾರ್ಯಕ್ರಮವನ್ನು ತ್ವರಿತಗೊಳಿಸಲು ಯೋಜಿಸಿದ್ದು, ವರ್ಷ್ಯಾಂತ್ಯದ ವೇಳೆಗೆ ಎಲ್ಲರಿಗೂ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದೆ.
ಕೋವಿಡ್-19 ಲಸಿಕೆ
ಕೋವಿಡ್-19 ಲಸಿಕೆ

ನವದೆಹಲಿ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಮುಂದುವರೆದಿರುವಂತೆಯೇ ಇತ್ತ ಕೇಂದ್ರ ಸರ್ಕಾರ ಕೋವಿಡ್ ಲಸಿಕೆ ನೀಡಿಕೆ ಕಾರ್ಯಕ್ರಮವನ್ನು ತ್ವರಿತಗೊಳಿಸಲು ಯೋಜಿಸಿದ್ದು, ವರ್ಷ್ಯಾಂತ್ಯದ ವೇಳೆಗೆ ಎಲ್ಲರಿಗೂ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದೆ.

ಡಿಸೆಂಬರ್ 2021ರ ವೇಳೆಗೆ ದೇಶದ ಪ್ರತಿಯೊಬ್ಬ ಪ್ರಜೆಗೂ ಕರೋನ ಲಸಿಕೆ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ್ದು, ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ಈ ವರ್ಷಾಂತ್ಯದ ವೇಳೆಗೆ ದೇಶದ ಎಲ್ಲ ಜನರಿಗೆ ಲಸಿಕೆ ನೀಡುವುದಾಗಿ ಹೇಳಿದರು.

ದೇಶದ 130 ಕೋಟಿ ಜನರ ಪೈಕಿ ಶೇ.3ಕ್ಕಿಂತ ಕಡಿಮೆ ಜನರು ಇಲ್ಲಿಯವರೆಗೆ ಎರಡೂ ಡೋಸ್ ಲಸಿಕೆ ಗಳನ್ನು ಪಡೆದಿದ್ದಾರೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೇಂದ್ರದ ವಿರುದ್ದ ಚಾಟಿ ಬೀಸಿದ್ದರು. ಅದರ ನಡುವೆಯೇ ಸಚಿವರು ಮಾತನಾಡಿ, ಬರುವ ಡಿಸೆಂಬರ್ ಅಂತ್ಯದ ವೇಳೆಗೆ ಲಸಿಕೆಯ ನೀಡಿಕೆ ಪೂರ್ಣಗೊಳಿಸಲಾಗುವುದು. ಇದಕ್ಕಾಗಿ ಯೋಜನೆ ರೂಪಿಸಲಾಗಿದ್ದು, 108 ಕೋಟಿ ಜನರಿಗೆ 2016 ಕೋಟಿ ಡೋಸ್ ಲಸಿಕೆ ನೀಡುವ ಯೋಜನೆ ಸಿದ್ಧವಾಗಿದೆ ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ ಜಾವಡೇಕರ್, 'ರಾಹುಲ್ ಜಿ ಲಸಿಕೆಯ ಬಗ್ಗೆ ಕಾಳಜಿ ಹೊಂದಿದ್ದರೆ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ರಾಹುಲ್ ಗಮನ ಹರಿಸಲಿ ಎಂದು ಸಚಿವರು ಸವಾಲು ಹಾಕಿದ್ದಾರೆ. 

'ಭಾರತದ ಲಸಿಕಾ ಕಾರ್ಯಕ್ರಮವು  2021ಕ್ಕಿಂತ ಮೊದಲು ಪೂರ್ಣಗೊಳ್ಳುತ್ತದೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ವ್ಯಾಕ್ಸಿನೇಷನ್‌ನಲ್ಲಿ ಅವ್ಯವಸ್ಥೆ ಇದೆ. ಅವರು 18-44 ವರ್ಷಕ್ಕೆ ಅವರಿಗೆ ನೀಡಿರುವ ಕೋಟಾವನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ಇದಕ್ಕೂ ಮೊದಲು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಹುಲ್ ಗಾಂಧಿ, ಕೊರೊನಾದ ಎರಡನೇ ಅಲೆಗೆ ಪ್ರಧಾನಿ ಮೋದಿಯೇ ನೇರ ಹೊಣೆಯಾಗಿದ್ದಾರೆ. ಅವರಿಗೆ ಕೊರೊನಾ ಸಾಂಕ್ರಾಮಿಕವನ್ನು ಅರ್ಥ ಮಾಡಿಕೊಳ್ಳಲು ಆಗಿಲ್ಲ. ಕೋವಿಡ್ ಮತ್ತು ಲಾಕ್‌ಡೌನ್‌ಗಳಿಗೆ ಲಸಿಕೆಗಳು ಮಾತ್ರ ಶಾಶ್ವತ  ಪರಿಹಾರವಾಗಿದೆ, ಸಾಮಾಜಿಕ ಅಂತರ ಮತ್ತು ಮಾಸ್ಕ್ ಗಳು ತಾತ್ಕಾಲಿಕ. ಸರಿಯಾದ ವ್ಯಾಕ್ಸಿನೇಷನ್ ತಂತ್ರವಿಲ್ಲದೆ, ಭಾರತವು ಅನೇಕ ಅಲೆಗಳಿಗೆ ಸಾಕ್ಷಿಯಾಗಲಿದೆ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com