ಯಾಸ್ ಚಂಡಮಾರುತ: ಉತ್ತರ 24 ಪರಗಣ ಜಿಲ್ಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವೈಮಾನಿಕ ಸಮೀಕ್ಷೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಉತ್ತರ 24 ಪರಗಣ ಜಿಲ್ಲೆಯಲ್ಲಿ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.
ಮಮತಾ ಬ್ಯಾನರ್ಜಿ ವೈಮಾನಿಕ ಸಮೀಕ್ಷೆ
ಮಮತಾ ಬ್ಯಾನರ್ಜಿ ವೈಮಾನಿಕ ಸಮೀಕ್ಷೆ

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಉತ್ತರ 24 ಪರಗಣ ಜಿಲ್ಲೆಯಲ್ಲಿ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.

ಯಾಸ್ ಚಂಡಮಾರುತ ಪರಿಣಾಮ ಪ್ರವಾಹಕ್ಕೆ ತುತ್ತಾಗಿದ್ದ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಹಿಂಗಲ್ಗಂಜ್, ಹಸ್ನಾಬಾದ್, ಸಂದೇಶ್ಖಾಲಿ, ಪಿನಾಖಾ ಮತ್ತು ಇತರ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಮಮತಾ ಬ್ಯಾನರ್ಜಿ ಅವರೊಂದಿಗೆ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ ಅವರು ಸಾಥ್ ನೀಡಿದ್ದರು.  

ಈ ವೇಳೆ ಮಾತನಾಡಿದ ಮಮತಾ ಬ್ಯಾನರ್ಜಿ ಸಾಕಷ್ಟು ಪ್ರದೇಶಗಳಲ್ಲಿ ಪ್ರವಾಹ ವ್ಯಾಪಕಾಗಿದೆ. ಹೆಚ್ಚಿನ ಪ್ರದೇಶಗಳು ಮುಳುಗಿರುವುದನ್ನು ನಾನು ನೋಡಿದ್ದೇನೆ. ಕೃಷಿ ಹೊಲಗಳ ಮನೆಗಳು ಮತ್ತು ದೊಡ್ಡ ಪ್ರದೇಶಗಳು ನೀರಿನ ಅಡಿಯಲ್ಲಿ ಸಿಲುಕಿವೆ. ಮುಂದಿನ ದಿನಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕ್ಷೇತ್ರ ಸಮೀಕ್ಷೆಯನ್ನೂ ನಡೆಸಲಾಗುವುದು ಎಂದು ಮಮತಾ ಬ್ಯಾನರ್ಜಿ ಹೇಳಿದರು. ಬಳಿಕ ಅವರು ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಬ್ಲಾಕ್ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಆಡಳಿತಾತ್ಮಕ ಸಭೆ ನಡೆಸಿದರು.

ಯಾಸ್ ಚಂಡಮಾರುತದಿಂದಾಗಿ ಬಂಗಾಳದ ಪುರ್ಬಾ ಮದಿನಿಪುರ, ದಕ್ಷಿಣ ಮತ್ತು ಉತ್ತರ 24 ಪರಗಣ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಬುಧವಾರ ಬೆಳಿಗ್ಗೆ ನೆರೆಯ ಒಡಿಶಾದಲ್ಲಿ ಭೂಕುಸಿತವಾಗಿದೆ. ಚಂಡಮಾರುತದ ಜೊತೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಈ ಜಿಲ್ಲೆಗಳು ಪ್ರವಾಹದಲ್ಲಿ ಮುಳುಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com