ಕೋವಿಡ್-19: ಭಾರತದಲ್ಲಿ ಇಂದು 1.86 ಲಕ್ಷ ಹೊಸ ಕೇಸ್ ಪತ್ತೆ; 3,847 ಮಂದಿ ಸೋಂಕಿನಿಂದ ಸಾವು

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಯುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ. ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ 1,86,364 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 44 ದಿನಗಳ ಬಳಿಕ ದೈನಂದಿನ ಕೊರೋನಾ ಪ್ರಕರಣ ಭಾರೀ ಸಂಖ್ಯೆಯಲ್ಲಿ ಇಳಿಕೆಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಯುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ. ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ 1,86,364 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 44 ದಿನಗಳ ಬಳಿಕ ದೈನಂದಿನ ಕೊರೋನಾ ಪ್ರಕರಣ ಭಾರೀ ಸಂಖ್ಯೆಯಲ್ಲಿ ಇಳಿಕೆಯಾಗಿದೆ. 

ಇನ್ನು ಇದೇ ಅವಧಿಯಲ್ಲಿ 3,847 ಮಂದಿ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 3,18,895ಕ್ಕೆ ಏರಿಕೆಯಾಗಿದೆ. ಒಂದೇ ದಿನ 1,86,364 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,75,55,457ಕ್ಕೆ ತಲುಪಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 23,43,152ಕ್ಕೆ ಏರಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,59,459 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,48,93,410ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 20,70,508 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 33,90,39,861 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 20,57,20,660 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com