ತಮಿಳುನಾಡಿನಲ್ಲಿ ಜೂನ್ 7ರ ವರೆಗೆ ಸಂಪೂರ್ಣ ಲಾಕ್ ಡೌನ್ ವಿಸ್ತರಣೆ

ತಮಿಳುನಾಡಿನಲ್ಲಿ ಜಾರಿಯಲ್ಲಿರುವ ಸಂಪೂರ್ಣ ಲಾಕ್ ಡೌನ್ ಅನ್ನು ಜೂನ್ 7ರ ವರೆಗೆ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಶುಕ್ರವಾರ ಪ್ರಕಟಿಸಿದ್ದಾರೆ.
ಚೆನ್ನೈ
ಚೆನ್ನೈ

ಚೆನ್ನೈ: ತಮಿಳುನಾಡಿನಲ್ಲಿ ಜಾರಿಯಲ್ಲಿರುವ ಸಂಪೂರ್ಣ ಲಾಕ್ ಡೌನ್ ಅನ್ನು ಜೂನ್ 7ರ ವರೆಗೆ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಶುಕ್ರವಾರ ಪ್ರಕಟಿಸಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಸೋಂಕು ನಿಯಂತ್ರಿಸಲು ಲಾಕ್ ಡೌನ್ ಅನ್ನು ಮತ್ತೆ ಒಂದು ವಾರ ವಿಸ್ತರಿಸಲಾಗಿದ್ದು, ಜೂನ್ 7ರಂದು ಸಂಜೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ ಎಂದು ಸಿಎಂ ಸ್ಟಾಲಿನ್ ತಿಳಿಸಿದ್ದಾರೆ.

ಲಾಕ್ ಡೌನ್ ಸಮಯದಲ್ಲಿ ತರಕಾರಿಗಳು ಮತ್ತು ಹಣ್ಣುಗಳ ಸರಬರಾಜು ಸರ್ಕಾರಿ ಇಲಾಖೆಗಳ ಮೂಲಕ ಮುಂದುವರಿಯುತ್ತದೆ ಮತ್ತು ಸ್ಥಳೀಯ ದಿನಸಿ ಅಂಗಡಿಗಳ ಸಹಯೋಗದೊಂದಿಗೆ ದಿನಸಿ ವಸ್ತುಗಳನ್ನು ವಾಹನಗಳ ಮೂಲಕ ಅಥವಾ ತಳ್ಳು ಗಾಡಿಗಳ ಮೂಲಕ ಮಾರಾಟ ಮಾಡಲಾಗುತ್ತದೆ. ಅಲ್ಲದೆ, ದೂರವಾಣಿ ಮತ್ತು ಆನ್‌ಲೈನ್ ಮೂಲಕ ತೆಗೆದುಕೊಳ್ಳುವ ವಸ್ತುಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಲು ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಅನುಮತಿಸಲಾಗಿದೆ.

ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿ ಸ್ಟಾಲಿನ್ ಅವರು 13 ಕಿರಾಣಿ ವಸ್ತುಗಳನ್ನು ಹೊಂದಿರುವ ಕೋವಿಡ್-19 ಪರಿಹಾರ ಕಿಟ್‌ಗಳನ್ನು ಜೂನ್ ತಿಂಗಳಲ್ಲಿ ರಾಜ್ಯದ ಎಲ್ಲಾ ರೇಷನ್ ಕಾರ್ಡುದಾರರಿಗೆ ಉಚಿತವಾಗಿ ನೀಡಲಾಗುವುದು ಎಂದು ಹೇಳಿದ್ದಾರೆ.

ಕೊರೋನಾ ನಿಯಂತ್ರಿಸಲು ರಾಜ್ಯದಾದ್ಯಂತ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಜನರು ಅನಗತ್ಯವಾಗಿ ತಮ್ಮ ಮನೆಗಳಿಂದ ಹೊರಬರಬಾರದು ಎಂದು ಮುಖ್ಯಮಂತ್ರಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com