ವಾರಣಾಸಿ: ನವಜಾತ ಶಿಶುವಿಗೆ ಕೊರೋನಾ ಪಾಸಿಟಿವ್, ಆದರೆ ತಾಯಿಗೆ ನೆಗೆಟಿವ್!

ಹೆರಿಗೆಗೆ ಮುಂಚಿತವಾಗಿ ನಡೆಸಿದ ಕೊರೋನಾ ಪರೀಕ್ಷೆಯಲ್ಲಿ ತಾಯಿಗೆ ನೆಗೆಟಿವ್ ವರದಿ ಬಂದಿದ್ದು, ಹೆರಿಗೆಯ ಬಳಿಕ ನವಜಾತ ಶಿಶುವಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಘಟನೆಯೊಂದು ಉತ್ತರಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಾರಣಾಸಿ: ಹೆರಿಗೆಗೆ ಮುಂಚಿತವಾಗಿ ನಡೆಸಿದ ಕೊರೋನಾ ಪರೀಕ್ಷೆಯಲ್ಲಿ ತಾಯಿಗೆ ನೆಗೆಟಿವ್ ವರದಿ ಬಂದಿದ್ದು, ಹೆರಿಗೆಯ ಬಳಿಕ ನವಜಾತ ಶಿಶುವಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಘಟನೆಯೊಂದು ಉತ್ತರಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. 

ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ಸರ್ ಸುಂದರ್‌ಲಾಲ್ ಆಸ್ಪತ್ರೆಯಲ್ಲಿ ಹೆರಿಗೆಗೆ ಮುನ್ನ ತಾಯಿಗೆ ಮೇ 24 ರಂದು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ನಡೆಸಲಾಗಿದೆ. ಈ ವೇಳೆ ನೆಗೆಟಿವ್ ಇರುವುದು ತಿಳಿದುಬಂದಿದೆ. 

ಪರೀಕ್ಷೆಗೊಳಗಾದ ಮರುದಿನ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ವೇಳೆ ಮಗುವಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ವೈದ್ಯಕೀಯ ಅಧೀಕ್ಷಕ ಡಾ. ಕೌಶನ್ ಕುಮಾರ್ ಗುಪ್ತಾ ತಿಳಿಸಿದ್ದಾರೆ. ಆರ್‌ಟಿ-ಪಿಸಿಆರ್ ಪರೀಕ್ಷೆಯು ಕೆಲವು ನ್ಯೂನತೆಗಳಿಂದ ಕೂಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ಘಟನೆಗೆ ಸಂಬಂಧಿಸಿದಂತೆ ಬಿಎಚ್‍ಯು ಮೆಡಿಕಲ್ ಸುಪರಿಂಟೆಂಡೆಂಟ್ ತನಿಖೆಗೆ ಆದೇಶಿಸಿದ್ದಾರೆ. ಕೆಲವೇ ದಿನಗಳಲ್ಲಿ ಮತ್ತೆ ಇಬ್ಬರಿಗೂ ಹೊಸದಾಗಿ ಪರೀಕ್ಷೆ ಮಾಡಿಸಲಾಗುವುದು ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com