ಕೋವಿಡ್ ಮೂರನೇ ಅಲೆ ಎದುರಿಸಲು ವೈದ್ಯಕೀಯ ಸಂಸ್ಥೆಗಳ ಸಾಮರ್ಥ್ಯ ವೃದ್ಧಿ ಅಗತ್ಯ- ಅನುರಾಗ್ ಠಾಕೂರ್

ದೇಶದಲ್ಲಿ ಕೊರೋನಾವೈರಸ್  ಮೂರನೇ ಅಲೆಯ ಸಂಭಾವ್ಯ ಹಿನ್ನೆಲೆಯಲ್ಲಿ ಎಲ್ಲ ವೈದ್ಯಕೀಯ ಸಂಸ್ಥೆಗಳಲ್ಲಿಸಾಮರ್ಥ್ಯ ಹೆಚ್ಚಿಸುವ ಅಗತ್ಯವಿದೆ ಎಂದು ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಅನುರಾಗ್ ಠಾಕೂರ್
ಅನುರಾಗ್ ಠಾಕೂರ್

ಹಮೀರ್ ಪುರ: ದೇಶದಲ್ಲಿ ಕೊರೋನಾವೈರಸ್  ಮೂರನೇ ಅಲೆಯ ಸಂಭಾವ್ಯ ಹಿನ್ನೆಲೆಯಲ್ಲಿ ಎಲ್ಲ ವೈದ್ಯಕೀಯ ಸಂಸ್ಥೆಗಳಲ್ಲಿ
ಸಾಮರ್ಥ್ಯ ಹೆಚ್ಚಿಸುವ ಅಗತ್ಯವಿದೆ ಎಂದು ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವ ಅನುರಾಗ್ ಠಾಕೂರ್ 
ಹೇಳಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಕೋವಿಡ್ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್-19
ಸಾಂಕ್ರಾಮಿಕದ ಈ ಸಮಯದಲ್ಲಿ ಉತ್ತಮ ಪ್ರಯತ್ನಗಳನ್ನು ಮಾಡಲಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಂಘಟಿತ ಪ್ರಯತ್ನದಿಂದಾಗಿ 
ಸೋಂಕಿತ ಜನರಿಗೆ ಸಾಧ್ಯವಿರುವ ಎಲ್ಲಾ ಚಿಕಿತ್ಸೆ ಮತ್ತು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.

ಕೋವಿಡ್-19 ಲಸಿಕೆ ಅಭಿಯಾನವನ್ನು ಇತರ ದೇಶಗಳಿಗಿಂತ ಉತ್ತಮವಾಗಿ ನಡೆಸಲಾಗುತ್ತಿರುವ ವಿಶ್ವದ ಎರಡನೇ ದೇಶ
ಭಾರತವಾಗಿದೆ. ದೇಶದಲ್ಲಿ ಈವರೆಗೂ ಸುಮಾರು 220 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com