ಪ್ರೆಸ್, ಅಭಿವ್ಯಕ್ತಿ ಹಕ್ಕು ವಿಚಾರದಲ್ಲಿ ದೇಶದ್ರೋಹ ಕಾನೂನು ವ್ಯಾಖ್ಯಾನ ಕುರಿತು ಪರಿಶೀಲನೆ: ಸುಪ್ರೀಂ ಕೋರ್ಟ್

ಅಭಿವ್ಯಕ್ತಿ ಮತ್ತು ಮಾಧ್ಯಮ ಹಕ್ಕಿಗೆ ಸಂಬಂಧಿಸಿದಂತೆ ದೇಶದ್ರೋಹ ಕಾನೂನಿನ ವ್ಯಾಖ್ಯಾನವನ್ನು ಪರಿಶೀಲಿಸುವುದಾಗಿ ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: ಅಭಿವ್ಯಕ್ತಿ ಮತ್ತು ಮಾಧ್ಯಮ ಹಕ್ಕಿಗೆ ಸಂಬಂಧಿಸಿದಂತೆ ದೇಶದ್ರೋಹ ಕಾನೂನಿನ ವ್ಯಾಖ್ಯಾನವನ್ನು ಪರಿಶೀಲಿಸುವುದಾಗಿ ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ. ತೆಲುಗು ಸುದ್ದಿ ವಾಹಿನಿಗಳಾದ ಟಿವಿ 5 ಮತ್ತು ಎಬಿಎನ್ ಆಂಧ್ರ ಜ್ಯೋತಿ ವಿರುದ್ಧ ದಾಖಲಾದ ಕೇಸ್ ಗಳಲ್ಲಿ ಬಲವಂತದಿಂದ ಯಾವುದೇ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ರಕ್ಷಣೆ ನೀಡಿತ್ತು.

ವೈಎಸ್ ಆರ್ ಕಾಂಗ್ರೆಸ್ ಬಂಡಾಯ ಸಂಸದ ಕೆ ರಘು ರಾಮ ಕೃಷ್ಣರಾಜು ಅವರ ಅವಹೇಳನಕಾರಿ ಭಾಷಣ ಪ್ರಸಾರದಲ್ಲಿ ದೇಶದ್ರೋಹ ಆರೋಪದ ಮೇರೆಗೆ ಈ ಎರಡು ಚಾನೆಲ್ ಗಳ ಮೇಲೆ ಆಂಧ್ರಪ್ರದೇಶ ಪೊಲೀಸರು ಕೇಸ್ ದಾಖಲಿಸಿದ್ದರು.

ವಿಶೇಷವಾಗಿ ಪ್ರೆಸ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 124ಎ (ದೇಶದ್ರೋಹ) ವಿನಾಯಿತಿಗಳು ಮತ್ತು 153 (ಗುಂಪುಗಳ ನಡುವೆ ಶತ್ರುತ್ವ ಉತ್ತೇಜನ) ವಿವರಣೆ ಅಗತ್ಯವಿದೆ ಎಂದು ನ್ಯಾಯಾಧೀಶರಾದ ಡಿವೈ ಚಂದ್ರಚೂಡ್, ಎಲ್ ಎನ್ ರಾವ್ ಮತ್ತು ಎಸ್ ರವೀಂದ್ರ ಭಟ್ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಹೇಳಿತು.

ಈ ಎಫ್ ಐಆರ್ ಗೆ ಸಂಬಂಧಿಸಿದಂತೆ ಈ ಚಾನೆಲ್ ಗಳ ನೌಕರರು ಅಥವಾ ಸಿಬ್ಬಂದಿ ವಿರುದ್ಧ ಬಲವಂತದಿಂದ ಯಾವುದೇ ಕ್ರಮ ಕೈಗೊಳ್ಳದಂತೆ ಆಂಧ್ರ ಪ್ರದೇಶ ಪೊಲೀಸರನ್ನು ಸುಪ್ರೀಂ ಕೋರ್ಟ್ ತಡೆಗಟ್ಟಿತ್ತು. ಅಲ್ಲದೇ, ದೇಶದ್ರೋಹ ಸೇರಿದಂತೆ ವಿವಿಧ ಆರೋಪಗಳನ್ನು ಹೊರಿಸಲಾಗಿರುವ ಚಾನೆಲ್ ಸಲ್ಲಿಸಿರುವ ಅರ್ಜಿ ಕುರಿತಂತೆ ನಾಲ್ಕು ವಾರಗಳೊಳಗೆ ರಾಜ್ಯ ಸರ್ಕಾರದಿಂದ ಪ್ರತಿಕ್ರಿಯೆಯನ್ನು ವಿಭಾಗೀಯ ಪೀಠ ಕೋರಿದೆ. 

ಆಂಧ್ರಪ್ರದೇಶದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐಆರ್ ರದ್ದುಗೊಳಿಸಬೇಕೆಂದು ಕೋರಿ ಎರಡು ಮಾಧ್ಯಮ ಸಂಸ್ಥೆಗಳು ಇತ್ತೀಚಿಗೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com