ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ- ಅಖಿಲೇಶ್ ಯಾದವ್
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ಆಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೋಮವಾರ ಹೇಳಿದ್ದಾರೆ.
Published: 01st November 2021 01:17 PM | Last Updated: 01st November 2021 01:17 PM | A+A A-

ಅಖಿಲೇಶ್ ಯಾದವ್
ಲಖನೌ: ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ಆಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೋಮವಾರ ಹೇಳಿದ್ದಾರೆ.
ಚುನಾವಣೆಗಾಗಿ ಸಮಾಜವಾದಿ ಪಕ್ಷ ಹಾಗೂ ರಾಷ್ಟ್ರೀಯ ಲೋಕ ದಳ ನಡುವಣ ಮೈತ್ರಿಯನ್ನು ಅಂತಿಮಗೊಳಿಸಲಾಗಿದೆ. ಸೀಟು ಹಂಚಿಕೆ ಬಗ್ಗೆ ತೀರ್ಮಾನವಾಗಬೇಕಿದೆ ಎಂದು ಪಿಟಿಐ ಸಂದರ್ಶನದಲ್ಲಿ ಅವರು ತಿಳಿಸಿದ್ದಾರೆ.
ಅಜಂಗಢದಿಂದ ಸಮಾಜವಾದಿ ಪಕ್ಷದ ಸಂಸದರು ಹಾಗೂ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯೂ ಆಗಿರುವ ಅಖಿಲೇಶ್ ಯಾದವ್, ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ.
ಚಿಕ್ಕಪ್ಪ ಶಿವಪಾಲ್ ಯಾದವ್ ಅವರ ಪ್ರಗತಿಶೀಲ ಸಮಾಜವಾದಿ ಪಕ್ಷ ಲೋಹಿಯಾ (ಪಿಎಸ್‌ಪಿಎಲ್) ದಿಂದ ನೆರವು ಕುರಿತಂತೆ ಪ್ರತಿತ್ರಿಯಿಸಿದ ಅಖಿಲೇಶ್ ಯಾದವ್, ಇದರಲ್ಲಿ ನನಗೆ ಯಾವುದೇ ಸಮಸ್ಯೆ ಇಲ್ಲ, ಅವರಿಗೆ ಹಾಗೂ ಅವರ ಕಡೆಯವರಿಗೆ ಸರಿಯಾದ ಗೌರವವನ್ನು ನೀಡಲಾಗುವುದು ಎಂದು ಹೇಳಿದರು.