ಅಕ್ರಮ ಹಣ ವರ್ಗಾವಣೆ: ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಇಡಿ ಎದುರು ಹಾಜರು
ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರದ ಮಾಜಿ ಗೃಹಸಚಿವ ಅನಿಲ್ ದೇಶಮುಖ್ ಸೋಮವಾರ ಜಾರಿ ನಿರ್ದೇಶನಾಲಯದ(ಇ.ಡಿ) ಎದುರು ವಿಚಾರಣೆಗೆ ಹಾಜರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Published: 01st November 2021 02:05 PM | Last Updated: 01st November 2021 02:05 PM | A+A A-

ಅನಿಲ್ ದೇಶಮುಖ್
ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರದ ಮಾಜಿ ಗೃಹಸಚಿವ ಅನಿಲ್ ದೇಶಮುಖ್ ಸೋಮವಾರ ಜಾರಿ ನಿರ್ದೇಶನಾಲಯದ(ಇ.ಡಿ) ಎದುರು ವಿಚಾರಣೆಗೆ ಹಾಜರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಾಜಿ ಸಚಿವರಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದೆ ಎಂದು ಅವರು ಹೇಳಿದರು. ಮಾಜಿ ಸಚಿವ ಅನಿಲ್ ದೇಶಮುಖ್ ವಿರುದ್ಧ ದಾಖಲಾಗಿರುವ ಬಹುಕೋಟಿ ಲಂಚ ಮತ್ತು ಸುಲಿಗೆ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣ ಕುರಿತು ಇ.ಡಿ ತನಿಖೆ ನಡೆಸುತ್ತಿದೆ.
ಈ ಪ್ರಕರಣದಲ್ಲಿ ಇ.ಡಿ ವಿಚಾರಣೆಗೆ ಹಾಜರಾಗುವಂತೆ ನೀಡಿದ್ದ ನಾಲ್ಕು ನೋಟಿಸ್‌ಗಳಿಗೆ ಅನಿಲ್ ದೇಶಮುಖ್ ಪ್ರತಿಕ್ರಿಯಿಸಿರಲಿಲ್ಲ. ನಂತರ, ಮಾಜಿ ಸಚಿವರು ವಿಚಾರಣಾ ನೋಟಿಸ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಕಳೆದ ವಾರ ನಿರಾಕರಿಸಿದ ನಂತರ, ಈಗ ಇ.ಡಿ. ಎದುರು ವಿಚಾರಣೆಗೆ ಹಾಜರಾಗಿದ್ದಾರೆ.