ಪಾಕ್ ಪರ ಘೋಷಣೆ: ಯುವಕನ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಿದ ಪೊಲೀಸರು
ಪಾಕ್ ಪರ ಘೋಷಣೆ ಕೂಗಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
Published: 01st November 2021 08:35 PM | Last Updated: 01st November 2021 08:35 PM | A+A A-

ಸಾಂದರ್ಭಿಕ ಚಿತ್ರ
ಭೋಪಾಲ್: ಪಾಕ್ ಪರ ಘೋಷಣೆ ಕೂಗಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಇತ್ತೀಚೆಗೆ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ-20 ವಿಶ್ವಕಪ್ ಕ್ರಿಕೆಟ್ನಲ್ಲಿ, ಪಾಕ್ ಗೆದ್ದ ಬಳಿಕ ಯುವಕ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾನೆ. ಸತ್ನಾ ಜಿಲ್ಲೆಯ ವಿಶ್ವ ಹಿಂದೂ ಪರಿಷತ್ (ವಿಎಚ್ ಪಿ) ಜಿಲ್ಲಾ ಕಾರ್ಯದರ್ಶಿ ಅನುರಾಗ್ ಮಿಶ್ರಾ ಮತ್ತು ಇತರರು ನೀಡಿದ ದೂರಿನ ಮೇರೆಗೆ ಮೈಹಾರ್ ಪೊಲೀಸ್ ಠಾಣೆಯಲ್ಲಿ ಭಾನುವಾರ ರಾತ್ರಿ ವ್ಯಕ್ತಿಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ಮೊಹಮ್ಮದ್ ಫಾರೂಕ್(23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈ ವ್ಯಕ್ತಿಯನ್ನು ಭಾರತೀಯ ದಂಡ ಸಂಹಿತೆ 124-ಎ (ದೇಶದ್ರೋಹ), 153-ಬಿ, 504 ಮತ್ತು 505 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿಸಿದ ನಂತರ, ಫಾರೂಕ್ನನ್ನು ಸೋಮವಾರ ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಜೈಲಿಗೆ ಕಳುಹಿಸಲಾಗಿದೆ.