ಮೆಹಬೂಬಾ ಮುಫ್ತಿಯನ್ನು ಮತ್ತೆ ಗೃಹಬಂಧನದಲ್ಲಿ ಇರಿಸಲಾಗಿದೆ: ಪಿಡಿಪಿ

ಕಳೆದ ವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಮೃತಪಟ್ಟ ಯುವಕನ ಕುಟುಂಬವನ್ನು ಭೇಟಿ ಮಾಡಲು ಅನಂತನಾಗ್‌ಗೆ ತೆರಳುವುದನ್ನು ತಡೆಯಲು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರನ್ನು....
ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ
ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ

ಶ್ರೀನಗರ: ಕಳೆದ ವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಮೃತಪಟ್ಟ ಯುವಕನ ಕುಟುಂಬವನ್ನು ಭೇಟಿ ಮಾಡಲು ಅನಂತನಾಗ್‌ಗೆ ತೆರಳುವುದನ್ನು ತಡೆಯಲು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರನ್ನು ಸೋಮವಾರ ಮತ್ತೆ ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಪಿಡಿಪಿ ನಾಯಕರೊಬ್ಬರು ಹೇಳಿದ್ದಾರೆ.

ಮೆಹಬೂಬಾ ಅವರ ಮನೆಯ ಮುಖ್ಯ ಗೇಟ್‌ಗೆ ಪೊಲೀಸರು ಬೀಗ ಹಾಕಿದ್ದಾರೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕ ಹೇಳಿದ್ದಾರೆ.

ಭದ್ರತಾ ಕಾರಣಗಳಿಂದ ಪಿಡಿಪಿ ಮುಖ್ಯಸ್ಥರು ಅನಂತನಾಗ್‌ಗೆ ಭೇಟಿ ನೀಡಲು ಅವಕಾಶ ನೀಡಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಕ್ಟೋಬರ್ 24 ರಂದು ಶೋಪಿಯಾನ್ ಜಿಲ್ಲೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಸಿಬ್ಬಂದಿ ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಶಾಹಿದ್ ಅಹ್ಮದ್ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೆಹಬೂಬಾ ಅವರನ್ನು ನಗರದ ಗುಪ್ಕರ್ ಪ್ರದೇಶದಲ್ಲಿನ ಅವರ ಫೇರ್‌ವ್ಯೂ ನಿವಾಸದಲ್ಲಿ ಗೃಹಬಂಧನದಲ್ಲಿ ಇರಿಸಲಾಗಿದೆ ಮತ್ತು ಅವರಿಗೆ ಹೊರಗೆ ಹೋಗಲು ಅವಕಾಶ ನೀಡಲಿಲ್ಲ ಎಂದು ಪಿಡಿಪಿ ನಾಯಕ ಹೇಳಿದ್ದಾರೆ.

ಮುಫ್ತಿ ಅವರು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಹತ್ಯೆಗೀಡಾದ ಯುವಕ ಶಾಹಿದ್ ಅಹ್ಮದ್ ಅವರ ಕುಟುಂಬವನ್ನು ಭೇಟಿ ಮಾಡಿ, ದುಃಖಿತ ಕುಟುಂಬಕ್ಕೆ ಸಾಂತ್ವನ ಹೇಳಲು ಬಯಸಿದ್ದರು. ಆದರೆ ಅವರಿಗೆ ನಿವಾಸದಿಂದ ಹೊರಬರಲು ಅವಕಾಶ ನೀಡಲಿಲ್ಲ ಎಂದು ಪಕ್ಷದ ನಾಯಕ ತಿಳಿಸಿದ್ದಾರೆ.

ಪಿಡಿಪಿ ನಾಯಕನ ಪ್ರಕಾರ, ಪೊಲೀಸರು ಮೆಹಬೂಬಾ ಅವರ ಮನೆಯ ಮುಖ್ಯ ಗೇಟ್‌ಗೆ ಬೀಗ ಹಾಕಿದ್ದಾರೆ ಮತ್ತು ಅವರ ಸಂಚಾರಕ್ಕೆ ಅವಕಾಶ ನೀಡದಂತೆ ಗೇಟ್‌ನ ಹೊರಗೆ ಪೊಲೀಸ್ ವಾಹನವನ್ನು ನಿಲ್ಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com