66ನೇ ಕನ್ನಡ ರಾಜ್ಯೋತ್ಸವ: ಪ್ರಧಾನಿ ಮೋದಿಯಿಂದ ಕನ್ನಡದಲ್ಲಿ ಶುಭಾಶಯ
ನವೆಂಬರ್ 1, 2021 66ನೇ ಕನ್ನಡ ರಾಜ್ಯೋತ್ಸವ. ಇಂದು ಕರ್ನಾಟಕ ರಾಜ್ಯ ಉದಯವಾಗಿ 66 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಚನೆಯ ಸಂದರ್ಭ, ಅದಕ್ಕಾಗಿ ಕೆಲಸ ಮಾಡಿದ ಮಹನೀಯರು, ಕನ್ನಡ ಸಾಹಿತ್ಯ ಬೆಳವಣಿಗೆ, ರಾಜ್ಯದ ಸ್ಥಿತಿಗತಿ ಬಗ್ಗೆ ಮೆಲುಕು ಹಾಕಲಾಗುತ್ತದೆ.
Published: 01st November 2021 07:44 AM | Last Updated: 01st November 2021 08:17 AM | A+A A-

ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ನವೆಂಬರ್ 1, 2021 66ನೇ ಕನ್ನಡ ರಾಜ್ಯೋತ್ಸವ. ಇಂದು ಕರ್ನಾಟಕ ರಾಜ್ಯ ಉದಯವಾಗಿ 66 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಚನೆಯ ಸಂದರ್ಭ, ಅದಕ್ಕಾಗಿ ಕೆಲಸ ಮಾಡಿದ ಮಹನೀಯರು, ಕನ್ನಡ ಸಾಹಿತ್ಯ ಬೆಳವಣಿಗೆ, ರಾಜ್ಯದ ಸ್ಥಿತಿಗತಿ ಬಗ್ಗೆ ಮೆಲುಕು ಹಾಕಲಾಗುತ್ತದೆ.
ಈ ಸಂದರ್ಭದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಜನತೆಗೆ ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲಿ ಟ್ವೀಟ್ ಮಾಡಿರುವ ಅವರು, ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ.
— Narendra Modi (@narendramodi) November 1, 2021