ಉತ್ತರ ಪ್ರದೇಶ ಚುನಾವಣೆ: ಕಾಂಗ್ರೆಸ್ ನಿಂದ ಮಹಿಳೆಯರಿಗೆ ಭರವಸೆಗಳ ಮಹಾಪೂರ; ಉಚಿತ ಎಲ್ ಪಿಜಿ, ಬಸ್ಸು ಪ್ರಯಾಣದ ಭರವಸೆ 

ಮುಂದಿನ ವರ್ಷ ಆರಂಭದಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದ್ದು ಅದಕ್ಕೆ ವಿವಿಧ ಪಕ್ಷಗಳು ಈಗಾಗಲೇ ಸಜ್ಜಾಗುತ್ತಿವೆ. ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಶತಾಯಗತಾಯ ಗೆಲ್ಲಬೇಕೆಂದು ಪಣತೊಟ್ಟವರಂತೆ ರಾಜ್ಯದಲ್ಲಿ ಕೆಲಸ ಮಾಡುತ್ತಿದ್ದಾರೆ. 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ

ಲಕ್ನೊ: ಮುಂದಿನ ವರ್ಷ ಆರಂಭದಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದ್ದು ಅದಕ್ಕೆ ವಿವಿಧ ಪಕ್ಷಗಳು ಈಗಾಗಲೇ ಸಜ್ಜಾಗುತ್ತಿವೆ. ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಶತಾಯಗತಾಯ ಗೆಲ್ಲಬೇಕೆಂದು ಪಣತೊಟ್ಟವರಂತೆ ರಾಜ್ಯದಲ್ಲಿ ಕೆಲಸ ಮಾಡುತ್ತಿದ್ದಾರೆ. 

ಇಂದು ಲಕ್ನೊದಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಗೆ ತಮ್ಮ ಪಕ್ಷ ಪ್ರತ್ಯೇಕ ಚುನಾವಣಾ ಪ್ರಣಾಳಿಕೆಯನ್ನು ತಯಾರಿಸಿದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಉಚಿತ ಎಲ್ ಪಿಜಿ ಸಿಲಿಂಡರ್ ಮತ್ತು ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ ನೀಡಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಶೇಕಡಾ 40ರಷ್ಟು ಟಿಕೆಟ್ ನೀಡಲಾಗುತ್ತಿದ್ದು, ಮಹಿಳೆಯರನ್ನು ಸಶಕ್ತೀಕರಣಗೊಳಿಸುವುದಕ್ಕೆ ಕಾಂಗ್ರೆಸ್ ತೆಗೆದುಕೊಂಡಿರುವ ನಿರ್ಧಾರವಿದು ಎಂದು ಕಳೆದ ತಿಂಗಳು ಪ್ರಿಯಾಂಕಾ ಗಾಂಧಿ ಘೋಷಿಸಿದ್ದರು.

ಕಾಂಗ್ರೆಸ್ ಪಕ್ಷದ ಸರ್ಕಾರ ರಚನೆಯಾದ ನಂತರ, ಮಹಿಳೆಯರಿಗೆ ವಾರ್ಷಿಕವಾಗಿ ಮೂರು ಎಲ್‌ಪಿಜಿ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಾಗುವುದು ಮತ್ತು ಮಹಿಳೆಯರು ರಾಜ್ಯ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಪ್ರಿಯಾಂಕಾ ಹೇಳಿದರು.

ಉತ್ತರ ಪ್ರದೇಶದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಕಾಂಗ್ರೆಸ್ ಭರವಸೆಗಳನ್ನು ಪಟ್ಟಿ ಮಾಡುವ ಟ್ವೀಟ್‌ನೊಂದಿಗೆ ಪ್ರಿಯಾಂಕಾ ಗಾಂಧಿ ಚಿತ್ರವನ್ನು ಸಹ ಟ್ಯಾಗ್ ಮಾಡಿದ್ದಾರೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ರೂ. ಗೌರವಧನ, ಮೀಸಲಾತಿಯ ನಿಬಂಧನೆಗಳ ಪ್ರಕಾರ 40 ಪ್ರತಿಶತ ಹುದ್ದೆಗಳಿಗೆ ಮಹಿಳೆಯರ ನೇಮಕ, ವೃದ್ಧ ವಿಧವೆಯರಿಗೆ 1,000 ರೂ. ಪಿಂಚಣಿ ನೀಡುವುದು ಮತ್ತು ರಾಜ್ಯಾದ್ಯಂತ 75 ಕೌಶಲ್ಯ ಶಾಲೆಗಳನ್ನು ತೆರೆಯುವ ಭರವಸೆಗಳು ಸೇರಿವೆ. ಅದಕ್ಕೆ ಉತ್ತರ ಪ್ರದೇಶದ ವೀರ ಮಹಿಳೆಯರ ಹೆಸರಿಡಲಾಗುವುದು ಎಂದು ಹೇಳಿದರು. 

ಪ್ರಿಯಾಂಕಾ ಗಾಂಧಿ ಕಳೆದ ತಿಂಗಳು 12 ನೇ ತರಗತಿ ತೇರ್ಗಡೆಯಾದ ಎಲ್ಲಾ ಹೆಣ್ಣು ಮಕ್ಕಳಿಗೆ ಸ್ಮಾರ್ಟ್‌ಫೋನ್ ನೀಡಲಾಗುವುದು ಮತ್ತು ತಮ್ಮ ಪಕ್ಷವು ರಾಜ್ಯದಲ್ಲಿ ಸರ್ಕಾರ ರಚಿಸಿದರೆ ಎಲ್ಲಾ ಪದವೀಧರ ಹೆಣ್ಣುಮಕ್ಕಳಿಗೆ ಎಲೆಕ್ಟ್ರಿಕ್ ಸ್ಕೂಟರ್ ನೀಡಲಾಗುವುದು ಎಂದು ಘೋಷಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com