ವಾಟ್ಸಾಪ್ ಚಾಟ್‌ಗಳಿಂದ ಡ್ರಗ್ಸ್ ಸರಬರಾಜು ಮಾಡಿದ್ದಾರೆಂದು ಹೇಳಲು ಆಗುವುದಿಲ್ಲ: ನ್ಯಾಯಾಲಯ

ಕ್ರೂಸ್ ಡ್ರಗ್ಸ್ ಪ್ರಕರಣ ಸಂಬಂಧ ವಿಶೇಷ ನ್ಯಾಯಾಲಯ ಸೋಮವಾರ ತನ್ನ ಅಭಿಪ್ರಾಯ ಹೊರಹಾಕಿದೆ. ಕಳೆದ ವಾರ ಆಚಿತ್ ಕುಮಾರ್‌ಗೆ ಜಾಮೀನು ಮಂಜೂರು ಮಾಡಿದ ಎನ್ ಡಿಪಿಎಸ್ ವಿಶೇಷ ನ್ಯಾಯಾಲಯ...
ಆರ್ಯನ್ ಖಾನ್
ಆರ್ಯನ್ ಖಾನ್

ಮುಂಬೈ: ಕ್ರೂಸ್ ಡ್ರಗ್ಸ್ ಪ್ರಕರಣ ಸಂಬಂಧ ವಿಶೇಷ ನ್ಯಾಯಾಲಯ ಸೋಮವಾರ ತನ್ನ ಅಭಿಪ್ರಾಯ ಹೊರಹಾಕಿದೆ. ಕಳೆದ ವಾರ ಆಚಿತ್ ಕುಮಾರ್‌ಗೆ ಜಾಮೀನು ಮಂಜೂರು ಮಾಡಿದ ಎನ್ ಡಿಪಿಎಸ್ ವಿಶೇಷ ನ್ಯಾಯಾಲಯ, ಕೇವಲ ವಾಟ್ಸಾಪ್ ಚಾಟ್‌ಗಳ ಆಧಾರದ ಮೇಲೆ ಸಹ ಆರೋಪಿ ಆರ್ಯನ್ ಖಾನ್‌ಗೆ ಡ್ರಗ್ಸ್ ಸರಬರಾಜು ಮಾಡಿದ್ದಾನೆ ಎಂಬುದಕ್ಕೆ ಪೂರಾವೆ ಆಗುವುದಿಲ್ಲ ಎಂದಿದೆ.

ನಾರ್ಕೋಟಿಕ್ಸ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್(ಎನ್‌ಡಿಪಿಎಸ್) ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ನಿಯೋಜಿತವಾಗಿರುವ ವಿಶೇಷ ನ್ಯಾಯಾಧೀಶ ವಿವಿ ಪಾಟೀಲ್ ಅವರು ಶನಿವಾರ 22 ವರ್ಷದ ಆಚಿತ್ ಕುಮಾರ್‌ಗೆ ಜಾಮೀನು ಮಂಜೂರು ಮಾಡಿದ್ದರು. 

ನ್ಯಾಯಾಲಯವು ತನ್ನ ವಿವರವಾದ ಆದೇಶದಲ್ಲಿ ಆರ್ಯನ್ ಖಾನ್ ಜೊತೆ ವಾಟ್ಸಾಪ್ ಚಾಟ್ ಹೊರತುಪಡಿಸಿ. ಕುಮಾರ್ ಅಂತಹ ಚಟುವಟಿಕೆಗಳಲ್ಲಿ ತೊಡಗಿದ್ದಾರೆಂದು ತೋರಿಸಲು ಯಾವುದೇ ಪುರಾವೆಗಳಿಲ್ಲ. ಕೇವಲ ವಾಟ್ಸಾಪ್ ಚಾಟ್‌ಗಳ ಆಧಾರದ ಮೇಲೆ, ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು ಎಂದು ಹೇಳಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್​ ಖಾನ್​ ಹಾಗೂ ಅರ್ಬಾಜ್ ಮರ್ಚೆಂಟ್ ಅವರಿಗೆ ಕಳೆದ ಗುರುವಾರ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. 

ಆರ್ಯನ್ ಖಾನ್ ಮತ್ತು ಅರ್ಬಾಜ್ ಮರ್ಚೆಂಟ್ ಹೇಳಿಕೆಗಳ ಆಧಾರದ ಮೇಲೆ ಆಚಿತ್ ಕುಮಾರ್ ಅವರನ್ನು ಬಂಧಿಸಲಾಗಿದೆ ಎಂದು ಎನ್‌ಸಿಬಿ ಹೇಳಿಕೊಂಡಿತ್ತು. ಆಚಿತ್ ಕುಮಾರ್ ಅವರು ಆರ್ಯನ್ ಖಾನ್ ಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com