ನೀಟ್ ಫಲಿತಾಂಶ
ನೀಟ್ ಫಲಿತಾಂಶ

ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ; ಮೊದಲ ಶ್ರೇಣಿ ಹಂಚಿಕೊಂಡ ಮೂವರು ವಿದ್ಯಾರ್ಥಿಗಳು

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ವೈದ್ಯಕೀಯ ಕೋರ್ಸ್​ಗೆ ಪ್ರವೇಶಕ್ಕಾಗಿ ನಡೆಯುವ ನೀಟ್​ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. 

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ವೈದ್ಯಕೀಯ ಕೋರ್ಸ್​ಗೆ ಪ್ರವೇಶಕ್ಕಾಗಿ ನಡೆಯುವ ನೀಟ್​ ಪರೀಕ್ಷೆಯ ಫಲಿತಾಂಶ ಇಂದು (ನವೆಂಬರ್ 1) ಪ್ರಕಟವಾಗಿದೆ. 

ರಾಷ್ಟ್ರೀಯ ಟೆಸ್ಟಿಂಗ್ ಏಜೆನ್ಸಿಯಿಂದ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ. ನೀಟ್ ಪದವಿ ಕೋರ್ಸ್​ ಫಲಿತಾಂಶ ಘೋಷಣೆಗೆ ಸುಪ್ರೀಂಕೋರ್ಟ್ ಈ ಮೊದಲು ಅವಕಾಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಈಗ ಫಲಿತಾಂಶ ಪ್ರಕಟವಾಗಿದೆ.

ತೆಲಂಗಾಣದ ಮೃಣಾಲ್ ಕುಟ್ಟೇರಿ, ದೆಹಲಿಯ ತನ್ಮಯ ಗುಪ್ತಾ ಹಾಗೂ ಮಹಾರಾಷ್ಟ್ರದ ಕಾರ್ತಿಕ್ ಜಿ. ನಾಯರ್​ಗೆ ಟಾಪ್ ಶ್ರೇಣಿ ಲಭ್ಯವಾಗಿದೆ. ಮೂವರು ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ವೇಳೆ ಟೈ ಬ್ರೇಕಿಂಗ್​ ಫಾರ್ಮುಲಾ ಬಳಸಬೇಕು ಎಂದು ಎನ್​ಟಿಎ ಹೇಳಿದೆ. ಈಗ ಮೊದಲ ಶ್ರೇಣಿಯನ್ನು ಮೂವರು ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ. ನೀಟ್ ಯುಜಿಸಿ 2021 ಪರೀಕ್ಷೆಯಲ್ಲಿ ಒಟ್ಟು 15,44,275 ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಅದರಲ್ಲಿ 8,70,074 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕರ್ನಾಟಕದ ವಿದ್ಯಾರ್ಥಿಗಳು
ಇನ್ನು ನೀಟ್ ಪರೀಕ್ಷೆಯಲ್ಲಿ ಕರ್ನಾಟಕದ ಹಲವು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಚಿತ್ರದುರ್ಗದ ಎಸ್ಆರ್ಎಸ್ ಪದವಿಪೂರ್ವ ಕಾಲೇಜಿನ ಎಲ್ ಎನ್ ನಿಹಾರಿಕಾ, ಆರ್ ಶ್ರೇಯಸ್ ಎಂಬ ವಿದ್ಯಾರ್ಥಿಗಳು 720 ಅಂಕಗಳಿಗೆ 620 ಅಂಕಗಳಿಸಿದ್ದಾರೆ. ಅಂತೆಯೇ ಈ ಹಿಂದೆ ಸಿಇಟಿ ಪರೀಕ್ಷೆಯಲ್ಲಿ ಕರ್ನಾಟಕದಲ್ಲಿ ಟಾಪರ್ ಆಗಿದ್ದ ಮೈಸೂರು ಮೂಲದ ಮೇಘನ್ ಹೆಚ್ ಕೆ ಅವರು ನೀಟ್ ಪರೀಕ್ಷೆಯಲ್ಲಿ 5ನೇ ಸ್ಥಾನಗಳಿಸಿದ್ದು, ಒಟ್ಟು 715 ಅಂಕಗಳನ್ನು ಗಳಿಸಿ ದಾಖಲೆ ನಿರ್ಮಿಸಿದ್ದಾರೆ.

ಇ-ಮೇಲ್ ನಲ್ಲಿ ಫಲಿತಾಂಶ
NTA, NEET 2021 ಫಲಿತಾಂಶವನ್ನು ವಿದ್ಯಾರ್ಥಿಗಳಿಗೆ ಅವರ ಇಮೇಲ್‌ನಲ್ಲಿ ಕಳುಹಿಸಿದೆ. ಅಭ್ಯರ್ಥಿಗಳು NTA, NEET ನ ಅಧಿಕೃತ ಸೈಟ್‌ನಲ್ಲಿ neet.nta.nic.in (NTA Website) ನಲ್ಲಿ ಫಲಿತಾಂಶ ಮತ್ತು ಫೈನಲ್ ಅನ್ಸರ್ ಕೀ ಎರಡನ್ನೂ ಪರಿಶೀಲಿಸಬಹುದು.

ಫಲಿತಾಂಶ ಡೌನ್‌ಲೋಡ್ ಮಾಡುವುದು ಹೇಗೆ?
ನೀಟ್ ಪರೀಕ್ಷೆ ಪರೀಕ್ಷಿಸಲು ಎನ್​ಟಿಎಯ ಅಧಿಕೃತ ವೆಬ್‌ಸೈಟ್ ntaneet.nic.in ಗೆ ಭೇಟಿ ನೀಡಿ.
ವೆಬ್​ಸೈಟ್​ನ ಹೋಂ ಪೇಜ್​ನಲ್ಲಿ NEET ಫಲಿತಾಂಶದ ಲಿಂಕ್ ಅನ್ನು ಕ್ಲಿಕ್ ಮಾಡಿ.
ನಿಮ್ಮ ರಿಜಿಸ್ಟರ್ ಸಂಖ್ಯೆ ಮುಂತಾದ ವಿವರಗಳನ್ನು ನಮೂದಿಸಿ, ಲಾಗಿನ್ ಮಾಡಿ.
ಆಗ ನಿಮ್ಮ ಫಲಿತಾಂಶ ಸ್ಕ್ರೀನ್ ಮೇಲೆ ಗೋಚರಿಸುತ್ತದೆ.
ಅದನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್ ಔಟ್ ತೆಗೆದುಕೊಳ್ಳಿ.

Related Stories

No stories found.

Advertisement

X
Kannada Prabha
www.kannadaprabha.com