ಬೆಲೆ ಏರಿಕೆ ಉತ್ತುಂಗದಲ್ಲಿದ್ದು, ಕೇಂದ್ರ ಸರ್ಕಾರಕ್ಕೆ ಜನರ ಬಗ್ಗೆ ಸೂಕ್ಷ್ಮತೆ ಇಲ್ಲ: ರಾಹುಲ್ ಗಾಂಧಿ

ಬೆಳಕಿನ ಹಬ್ಬ ದೀಪಾವಳಿ ಆಚರಣೆ ನಡುವೆಯೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಕುರಿತು ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಬೆಳಕಿನ ಹಬ್ಬ ದೀಪಾವಳಿ ಆಚರಣೆ ನಡುವೆಯೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಕುರಿತು ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಇದು ದೀಪಾವಳಿ ಆಚರಿಸುವ ಸಮಯ. ಅಗತ್ಯ ವಸ್ತುಗಳ ಬೆಲೆಗಳು ಉತ್ತುಂಗದಲ್ಲಿವೆ. ಇದು ವ್ಯಂಗ್ಯದ ವಿಷಯವಲ್ಲ. ಮೋದಿ ಸರ್ಕಾರ, ಸಾರ್ವಜನಿಕರ ಬಗ್ಗೆ ಸೂಕ್ಷ್ಮ ಹೃದಯ ಹೊಂದಬೇಕೆಂದು ನಾನು ಬಯಸುತ್ತೇನೆಂದು ಹೇಳಿದ್ದಾರೆ.

ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಇಂದು ಯಾವುದೇ ರೀತಿಯ ಏರಿಕೆಯಾಗದೆ ಸ್ಥಿರವಾಗಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರು ಈ ಹೇಳಿಕೆ ನೀಡಿದ್ದಾರೆಂದು ತಿಳಿದುಬಂದಿದೆ.

ಸತತ ಏಳು ದಿನಗಳ ಕಾಲ ಏರಿಕೆ ಕಂಡಿದ್ದ ಪೆಟ್ರೋಲ್ ದರದಲ್ಲಿ ಇಂದು ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಕೂಡ ಇಂದು ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 110.04 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.42 ರೂಪಾಯಿ ನಿಗದಿಯಾಗಿದೆ. ಹೈದಾರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 114.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 107.40 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 113.93 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.50 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 115.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 106.62 ರೂಪಾಯಿ ನಿಗದಿಯಾಗಿದೆ.

ನವೆಂಬರ್ 1ರಂದಷ್ಟೇ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ರೂ. 265ರಷ್ಟು ಏರಿಕೆ ಮಾಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com