ಕಟ್ಟಡ ಕಾರ್ಮಿಕರಿಗೆ ದೀಪಾವಳಿ ಗಿಫ್ಟ್: ತಲಾ 3,100 ರೂಪಾಯಿ ಆರ್ಥಿಕ ನೆರವು ಘೋಷಿಸಿದ ಪಂಜಾಬ್ ಸಿಎಂ
ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಅವರು ಬುಧವಾರ ಕಟ್ಟಡ ಕಾರ್ಮಿಕರಿಗೆ ದೀಪಾವಳಿ ಉಡುಗೊರೆ ನೀಡಿದ್ದು, ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ತಲಾ 3,100 ರೂಪಾಯಿ ಮಧ್ಯಂತರ ಆರ್ಥಿಕ ಪರಿಹಾರ...
Published: 03rd November 2021 06:32 PM | Last Updated: 03rd November 2021 06:32 PM | A+A A-

ಚರಣ್ ಜಿತ್ ಸಿಂಗ್ ಚನ್ನಿ
ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಅವರು ಬುಧವಾರ ಕಟ್ಟಡ ಕಾರ್ಮಿಕರಿಗೆ ದೀಪಾವಳಿ ಉಡುಗೊರೆ ನೀಡಿದ್ದು, ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ತಲಾ 3,100 ರೂಪಾಯಿ ಮಧ್ಯಂತರ ಆರ್ಥಿಕ ಪರಿಹಾರ ಘೋಷಿಸಿದ್ದಾರೆ.
3,100 ಆರ್ಥಿಕ ಅನುದಾನವು ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬಗಳಿಗೆ ಬೆಳಕಿನ ಹಬ್ಬದಂದು ಶುಭ ಸುದ್ದಿ ಆಗಿದೆ ಎಂದು ಪಂಜಾಬ್ ಸಿಎಂ ಹೇಳಿದ್ದಾರೆ.
ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕಾರ್ಮಿಕರು ಎದುರಿಸುತ್ತಿರುವ ಕಷ್ಟಗಳನ್ನು ತಗ್ಗಿಸುವ ಉದ್ದೇಶದಿಂದ ಈ ನೆರವು ಘೋಷಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಂಡ ಕಾರ್ಮಿಕರ ಬ್ಯಾಂಕ್ ಖಾತೆಗೆ ನೇರವಾಗಿ ಈ ಹಣವನ್ನು ವರ್ಗಾಯಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಮಂಡಳಿಯು ರಾಜ್ಯಾದ್ಯಂತ ಸುಮಾರು 3.17 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರನ್ನು ಹೊಂದಿದ್ದು, ಪರಿಹಾರದ ಮೊತ್ತ 90-100 ಕೋಟಿ ರೂಪಾಯಿಗಳನ್ನು ಒಳಗೊಂಡಿರುತ್ತದೆ ಎಂದು ಸರ್ಕಾರ ಹೇಳಿದೆ.