ತಮಿಳುನಾಡು ಸರ್ಕಾರದಿಂದ ಪೊಲೀಸ್​ ಸಿಬ್ಬಂದಿಗೆ ವಾರದ ರಜೆ ಘೋಷಣೆ

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಆದೇಶದ ಮೇರೆಗೆ ಪೊಲೀಸ್ ಸಿಬ್ಬಂದಿಗೆ ವಾರದ ರಜೆಯನ್ನು ನೀಡುವ ಸರ್ಕಾರಿ ಆದೇಶವನ್ನು ಬುಧವಾರ ಹೊರಡಿಸಲಾಗಿದೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚೆನ್ನೈ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಆದೇಶದ ಮೇರೆಗೆ ಪೊಲೀಸ್ ಸಿಬ್ಬಂದಿಗೆ ವಾರದ ರಜೆಯನ್ನು ನೀಡುವ ಸರ್ಕಾರಿ ಆದೇಶವನ್ನು ಬುಧವಾರ ಹೊರಡಿಸಲಾಗಿದೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.

ಈ ಆದೇಶವು ಗ್ರೇಡ್-II ಹಂತದ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಹೆಡ್ ಕಾನ್‌ಸ್ಟೆಬಲ್‌ಗಳವರೆಗಿನ ಸಿಬ್ಬಂದಿಗೆ ಅನ್ವಯಿಸುತ್ತದೆ. ವಾರದಲ್ಲಿ ಒಂದು ದಿನ ರಜೆ ನೀಡುವುದರಿಂದ ಪೊಲೀಸ್ ಸಿಬ್ಬಂದಿ ರಿಫ್ರೆಶ್ ಆಗಿ ಮತ್ತು ಉತ್ಸಾಹದಿಂದ ತಮ್ಮ ಸವಾಲಿನ ಕೆಲಸವನ್ನು ಮುಂದುವರಿಸಲು ಸಹಾಯ ಮಾಡುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಸ್ಟಾಲಿನ್ ಸೆಪ್ಟೆಂಬರ್ 13 ರಂದು ವಿಧಾನಸಭೆಯಲ್ಲಿ ಪೊಲೀಸ್ ಇಲಾಖೆಗೆ ಅನುದಾನದ ಬೇಡಿಕೆಯ ಮೇಲಿನ ಚರ್ಚೆಗೆ ಉತ್ತರಿಸುವಾಗ ಪೊಲೀಸ್ ಸಿಬ್ಬಂದಿಗೆ ವಾರದ ರಜೆ ಘೋಷಿಸಿದ್ದರು.

ವಾರದ ರಜೆಯಿಂದ ಪೊಲೀಸರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಮತ್ತು ಅವರ ಕುಟುಂಬದೊಂದಿಗೆ ಸಮಯ ಕಳೆಯಲು ಸಹಾಯ ಮಾಡುತ್ತದೆ ಎಂದು ಸ್ಟಾಲಿನ್ ಅವರು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com