ಕೇಂದ್ರ ಅಬಕಾರಿ ಸಂಕ ಕಡಿತಗೊಳಿಸಿದ ನಂತರ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತಗೊಳಿಸಿದ ಬಿಹಾರ

ಕೇಂದ್ರ ಸರ್ಕಾರ ದೇಶದ ಜನೆತೆಗೆ ದೀಪಾವಳಿ ಉಡುಗೊರೆ ನೀಡಿದ ಬೆನ್ನಲ್ಲೇ ಬಿಹಾರ ಸರ್ಕಾರ ಸಹ ರಾಜ್ಯದ ಜನತೆಗೆ ಮತ್ತೊಂದು ಗಿಫ್ಟ್ ನೀಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ದರವನ್ನು...
ನಿತೀಶ್ ಕುಮಾರ್
ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರ ದೇಶದ ಜನೆತೆಗೆ ದೀಪಾವಳಿ ಉಡುಗೊರೆ ನೀಡಿದ ಬೆನ್ನಲ್ಲೇ ಬಿಹಾರ ಸರ್ಕಾರ ಸಹ ರಾಜ್ಯದ ಜನತೆಗೆ ಮತ್ತೊಂದು ಗಿಫ್ಟ್ ನೀಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ದರವನ್ನು ಪ್ರತಿ ಲೀಟರ್ ಗೆ ಮೂರು ರೂಪಾಯಿಗಿಂತ ಹೆಚ್ಚು ಕಡಿತಗೊಳಿಸಿದೆ.

ನಿನ್ನೆಯಷ್ಟೇ ಕೇಂದ್ರ ಸರ್ಕಾರ ತೈಲ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು. ಇಂದು ಬಿಹಾರದ ನಿತೀಶ್ ಕುಮಾರ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ದರವನ್ನು ಪ್ರತಿ ಲೀಟರ್‌ಗೆ 3.90 ರೂ.ಕಡಿಮೆ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ನಿತೀಶ್ ಕುಮಾರ್ ಅವರು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡುವ ಕೇಂದ್ರದ ಕ್ರಮವನ್ನು ಅನುಸರಿಸಿ, ರಾಜ್ಯ ಸರ್ಕಾರವು ವ್ಯಾಟ್ ದರವನ್ನು ಕಡಿಮೆ ಮಾಡುವ ಮೂಲಕ ಜನರಿಗೆ ಹೆಚ್ಚುವರಿ ರಿಲೀಫ್ ನೀಡಲು ನಿರ್ಧರಿಸಿದೆ. ಪೆಟ್ರೋಲ್ ಬೆಲೆಯು ಲೀಟರ್‌ಗೆ 3.20 ರೂ.ಗಳಷ್ಟು ಇಳಿಕೆಯಾಗಲಿದ್ದು, ಡೀಸೆಲ್‌ ಬೆಲೆ ಪ್ರತಿ ಲೀಟರ್ 3.90 ರೂ. ಕಡಿಮೆಯಾಗಲಿದೆ" ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಬುಧವಾರ, ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 5 ರೂಪಾಯಿ ಮತ್ತು ಮತ್ತು ಡೀಸೆಲ್ ಮೇಲಿನ ಸುಂಕವನ್ನು 10 ರೂ. ಕಡಿತಗೊಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com