ಇಂಧನ ಬೆಲೆ ರೂ.50ಕ್ಕೆ ಇಳಿಯಬೇಕಾದರೆ ಬಿಜೆಪಿಯನ್ನು ಸಂಪೂರ್ಣವಾಗಿ ಸೋಲಿಸಬೇಕು: ಸಂಜಯ್ ರಾವತ್

ಪೆಟ್ರೋಲ್ ಹಾಗೂ ಡೀಸೆಲ್  ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ಕ್ರಮವಾಗಿ 5, ಮತ್ತು 10 ರೂ.ನಷ್ಟು ಕೇಂದ್ರ ಸರ್ಕಾರ ಕಡಿತ ಮಾಡಿದ ಬೆನ್ನಲ್ಲೇ, ಗುರುವಾರ ಹೇಳಿಕೆ ನೀಡಿರುವ ಶಿವಸೇನಾ ಸಂಸದ ಸಂಜಯ್ ರಾವತ್, ಇಂಧನ ಬೆಲೆಯನ್ನು 50 ರೂ.ಗೆ ಇಳಿಸಲು ಬಿಜೆಪಿಯನ್ನು ಸಂಪೂರ್ಣವಾಗಿ ಸೋಲಿಸಬೇಕು ಎಂದಿದ್ದಾರೆ.
ಸಂಜಯ್ ರಾವತ್
ಸಂಜಯ್ ರಾವತ್

ಮುಂಬೈ: ಪೆಟ್ರೋಲ್ ಹಾಗೂ ಡೀಸೆಲ್  ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ಕ್ರಮವಾಗಿ 5, ಮತ್ತು 10 ರೂ.ನಷ್ಟು ಕೇಂದ್ರ ಸರ್ಕಾರ ಕಡಿತ ಮಾಡಿದ ಬೆನ್ನಲ್ಲೇ, ಗುರುವಾರ ಹೇಳಿಕೆ ನೀಡಿರುವ ಶಿವಸೇನಾ ಸಂಸದ ಸಂಜಯ್ ರಾವತ್, ಇಂಧನ ಬೆಲೆಯನ್ನು 50 ರೂ.ಗೆ ಇಳಿಸಲು ಬಿಜೆಪಿಯನ್ನು ಸಂಪೂರ್ಣವಾಗಿ ಸೋಲಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಇಂಧನ‌ ದರ ಕಡಿತ: ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ; ಪೆಟ್ರೋಲ್, ಡಿಸೇಲ್ ಬೆಲೆ ಎಷ್ಟಾಗಲಿದೆ!
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಇಂಧನ ಬೆಲೆ 100ರೂ. ಗೆ ಏರದಂತೆ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದರು. ದೇಶದಲ್ಲಿ ಕೆಲ ದಿನಗಳಿಂದ ಪೆಟ್ರೋಲ್ ಬೆಲೆ ರೂ.100 ಗಿಂತ ಅಧಿಕವಾಗಿದೆ. 

ಪೆಟ್ರೋಲ್ ಬೆಲೆಯಲ್ಲಿ 5 ರೂ. ಕಡಿತ ಮಾಡಿರುವುದರಿಂದ ಯಾವುದೇ ಉದ್ದೇಶ  ಸಾಧಿಸಿದಂತಲ್ಲ, ಅದನ್ನು ಕನಿಷ್ಠ 25ಕ್ಕೆ ರೂ.ಗೆ ತದನಂತರ 50 ರೂ.ಗೆ ಇಳಿಸಬೇಕು ಎಂದು ರಾವತ್ ಹೇಳಿದರು. 

ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ ನಂತರ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆಯಲ್ಲಿ 5 ರೂ. ಕಡಿತ ಮಾಡಿದೆ. ಇದನ್ನು 50 ರೂ.ಗೆ ಇಳಿಸಲು ಬಿಜೆಪಿಯನ್ನು ಸಂಪೂರ್ಣವಾಗಿ ಸೋಲಿಸಬೇಕು ಎಂದರು. 

ಜನರು ಸಾಲ ಪಡೆದು ದೀಪಾವಳಿ ಆಚರಿಸಬೇಕಾಗಿದೆ. ಹಣದುಬ್ಬರ ಕಾರಣದಿಂದ ಹಬ್ಬದ ವಾತವಾರಣ ಇಲ್ಲದಂತಾಗಿದೆ ಎಂದು ರಾಜ್ಯಸಭಾ ಸದಸ್ಯರೂ ಆಗಿರುವ ಸಂಜಯ್ ರಾವತ್ ಹೇಳಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com