ಛತ್ತೀಸ್‌ಗಢ: ಜನತಾ ಕಾಂಗ್ರೆಸ್ ಶಾಸಕ ದೇವವ್ರತ್ ಸಿಂಗ್ ನಿಧನ

ಜನತಾ ಕಾಂಗ್ರೆಸ್ ಛತ್ತೀಸ್‌ಗಢ(ಜೆ) ಶಾಸಕ ಮತ್ತು ಮಾಜಿ ಸಂಸದ ದೇವವ್ರತ್ ಸಿಂಗ್ ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಯ್‌ಪುರ: ಜನತಾ ಕಾಂಗ್ರೆಸ್ ಛತ್ತೀಸ್‌ಗಢ(ಜೆ) ಶಾಸಕ ಮತ್ತು ಮಾಜಿ ಸಂಸದ ದೇವವ್ರತ್ ಸಿಂಗ್ ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

52 ವರ್ಷದ ಶಾಸಕ ದೇವವ್ರತ್ ಸಿಂಗ್ ಅವರಿಗೆ ಎದೆ ನೋವು ಕಾಣಿಸಿಕೊಂಡ ನಂತರ ಅವರನ್ನು ರಾಜ್ಯದ ರಾಜಧಾನಿ ರಾಯ್‌ಪುರದಿಂದ ಸುಮಾರು 90 ಕಿಮೀ ದೂರದಲ್ಲಿರುವ ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯ ಖೈರಗಢ್‌ನಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

"ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಸಿಂಗ್ ಅವರಿಗೆ ಎದೆನೋವು ಕಾಣಿಸಿಕೊಂಡಿತು, ನಂತರ ಅವರನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು" ಎಂದು ಶಾಸಕರ ಹತ್ತಿರದ ಸಂಬಂಧಿ ಸುನಿಲ್ ಸಿಂಗ್ ದೂರವಾಣಿ ಮೂಲಕ ಪಿಟಿಐಗೆ ತಿಳಿಸಿದ್ದಾರೆ.

ಜನತಾ ಕಾಂಗ್ರೆಸ್ ನಾಯಕನ ಅಂತಿಮ ವಿಧಿವಿಧಾನಗಳು ಖೈರಾಘಢದಲ್ಲಿ ನಡೆಯಲಿದೆ. ದೇವವ್ರತ್ ಸಿಂಗ್ ಅವರಿಗೆ ಒಬ್ಬ ಮಗ ಮತ್ತು ಮಗಳು ಇದ್ದಾರೆ ಎಂದು ಸಂಬಂಧಿಕರು ಹೇಳಿದ್ದಾರೆ.

ಈ ವರ್ಷದ ಮಾರ್ಚ್‌ನಲ್ಲಿ ಛತ್ತೀಸ್‌ಗಢ ವಿಧಾನಸಭೆಯ ಬಜೆಟ್ ಅಧಿವೇಶನ ನಡೆಯುತ್ತಿದ್ದ ವೇಳೆ ಶಾಸಕರಿಗೆ ಕೊರೋನಾ ಸೋಂಕು ತಗುಲಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com