ಅನಂತಪುರದಲ್ಲಿ ಭೀಕರ ರಸ್ತೆ ಅಪಘಾತ: ಕಾರು-ಆಟೋ ನಡುವೆ ಡಿಕ್ಕಿ, 6 ಮಂದಿ ಮಹಿಳೆಯರ ದುರ್ಮರಣ
ಆಂಧ್ರಪ್ರದೇಶದ ಅನಂತಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 6 ಮಂದಿ ಮಹಿಳೆಯರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಭವಿಸಿದೆ.
Published: 05th November 2021 10:08 AM | Last Updated: 05th November 2021 10:45 AM | A+A A-

ಆಟೋಗೆ ಡಿಕ್ಕಿ ಹೊಡೆದಿರುವ ಕಾರು.
ಅನಂತಪುರ: ಆಂಧ್ರಪ್ರದೇಶದ ಅನಂತಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 6 ಮಂದಿ ಮಹಿಳೆಯರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಭವಿಸಿದೆ.
ಅನಂತಪುರದ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಪಾಮಿಡಿ ಮಂಡಲದ ಬಳಿ ಕೃಷಿ ಕಾರ್ಮಿಕರನ್ನು ಹೊತ್ತು ಆಟೋವೊಂದು ಚಲಿಸುತ್ತಿತ್ತು. ಆಟೋದಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಈ ವೇಳೆ ಎದುರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಆಟೋಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ 6 ಮಂದಿ ಮಹಿಳೆಯರು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. ಘಟನೆಯಲ್ಲಿ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗಾಯಗೊಂಡಿರುವ 7 ಮಂದಿಯಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.