ಕ್ರೂಸ್ ಡ್ರಗ್ಸ್ ಪ್ರಕರಣ: ಎನ್ ಸಿಬಿ ಮುಂದೆ ವಿಚಾರಣೆಗೆ ಹಾಜರಾದ ಆರ್ಯನ್ ಖಾನ್ 

ಕ್ರೂಸ್ ಹಡಗಿನಲ್ಲಿ ಡ್ರಗ್ಸ್  ಪತ್ತೆಯಾದ ಪ್ರಕರಣಕ್ಕೆ  ಸಂಬಂಧಿಸಿದಂತೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಬಾಲಿವುಡ್ ನಟ ಶಾರೂಖ್ ಖಾನ್ ಅವರ ಮಗ ಆರ್ಯನ್ ಖಾನ್ ಇಂದು ಮಾದಕ ದ್ರವ್ಯ ನಿಯಂತ್ರಣ ಮಂಡಳಿ (ಎನ್ ಸಿಬಿ) ಮುಂದೆ ಹಾಜರಾದರು ಎಂದು ಮೂಲಗಳು ತಿಳಿಸಿವೆ.
ಆರ್ಯನ್ ಖಾನ್
ಆರ್ಯನ್ ಖಾನ್

ಮುಂಬೈ: ಕ್ರೂಸ್ ಹಡಗಿನಲ್ಲಿ ಡ್ರಗ್ಸ್  ಪತ್ತೆಯಾದ ಪ್ರಕರಣಕ್ಕೆ  ಸಂಬಂಧಿಸಿದಂತೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಬಾಲಿವುಡ್ ನಟ ಶಾರೂಖ್ ಖಾನ್ ಅವರ ಮಗ ಆರ್ಯನ್ ಖಾನ್ ಇಂದು ಮಾದಕ ದ್ರವ್ಯ ನಿಯಂತ್ರಣ ಮಂಡಳಿ (ಎನ್ ಸಿಬಿ) ಮುಂದೆ ಹಾಜರಾದರು ಎಂದು ಮೂಲಗಳು ತಿಳಿಸಿವೆ.

ಬಾಂಬೆ ಹೈಕೋರ್ಟ್ ಜಾಮೀನು ನೀಡಿದ ನಂತರ ಅಕ್ಟೋಬರ್ 30 ರಂದು ಅರ್ತೂರ್ ರಸ್ತೆಯ ಕಾರಾಗೃಹದಿಂದ ಅಕ್ಟೋಬರ್ 30 ರಂದು ಬಿಡುಗಡೆಯಾದ ನಂತರ ಇದೇ ಮೊದಲ ಬಾರಿಗೆ ಆರ್ಯನ್ ಖಾನ್ ಎನ್ ಸಿಬಿ ಮುಂದೆ ವಿಚಾರಣೆಗೆ ಹಾಜರಾದರು. 

ಹೈಕೋರ್ಟ್ ವಿಧಿಸಿರುವ ಷರತ್ತಿನ ಅನ್ವಯ ಇಂದು ಮಧ್ಯಾಹ್ನ ಸುಮಾರು 12-15ಕ್ಕೆ ದಕ್ಷಿಣ ಮುಂಬೈಯ ಬಲ್ಲಾರ್ಡ್ ನಲ್ಲಿರುವ ಎನ್ ಸಿಬಿ ಕಚೇರಿಗೆ ಆರ್ಯನ್ ಖಾನ್ ತಲುಪಿದರು ಎಂದು ಮೂಲಗಳು ಹೇಳಿವೆ. ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನ ಮೇಲೆ ಅಕ್ಟೋಬರ್ 3 ರಂದು ಎನ್ ಸಿಬಿ ದಾಳಿ ನಡೆಸಿದ ನಂತರ ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿತ್ತು. 

 ಅಕ್ಟೋಬರ್ 28 ರಂದು ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದಾಗ್ಯೂ, ಆತನ ಬಿಡುಗಡೆಗೆ ಸಂಬಂಧಿಸಿದ ದಾಖಲಾತಿಗಳು ಜೈಲಿಗೆ ತಲುಪದ ಕಾರಣ ಅಕ್ಟೋಬರ್ 30 ರವರೆಗೂ ಜೈಲಿನಿಂದ ಬಿಡುಗಡೆಯಾಗಿರಲಿಲ್ಲ.  

1  ಲಕ್ಷ ವೈಯಕ್ತಿಕ ಬಾಂಡ್  , ಒಬ್ಬರು ಅಥವಾ ಇಬ್ಬರು ಶ್ಯೂರಿಟಿಯೊಂದಿಗೆ 14 ಷರತ್ತುಗಳೊಂದಿಗೆ ಕಳೆದ ಶುಕ್ರವಾರ ಹೈಕೋರ್ಟ್ ಆರ್ಯನ್ ಹಾಗೂ ಆತನ ಇಬ್ಬರು ಸ್ನೇಹಿತರಿಗೆ ಜಾಮೀನು ಮಂಜೂರು ಮಾಡಿತ್ತು. ಪ್ರತಿ ಶುಕ್ರವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ಒಳಗಡೆ ಎನ್ ಸಿಬಿ ಮುಂದೆ ಹಾಜರಾಗಬೇಕೆಂದು ಷರತ್ತು ವಿಧಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com