ಪಕ್ಷ ನಿರ್ಧರಿಸಿದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ: ಯೋಗಿ ಆದಿತ್ಯ ನಾಥ್

ಭಾರತೀಯ ಜನತಾ ಪಕ್ಷವು ನಿರ್ಧರಿಸಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್

ಗೋರಖ್‌ಪುರ: ಭಾರತೀಯ ಜನತಾ ಪಕ್ಷವು ನಿರ್ಧರಿಸಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, 'ನಾನು ಯಾವಾಗಲೂ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಮತ್ತು ಪಕ್ಷ ಒಪ್ಪುವುದಾದರೇ ನಾನು ಮುಂಬರುವ ಚುನಾವಣೆಯಲ್ಲಿ ಎಲ್ಲಿ ಬೇಕಾದರೂ ಸ್ಪರ್ಧಿಸುತ್ತೇನೆ' ಎಂದು ಹೇಳಿದರು.

ಯೋಗಿ ಆದಿತ್ಯನಾಥ್ ಅವರು ಸದ್ಯ ಉತ್ತರ ಪ್ರದೇಶದ ವಿಧಾನ ಪರಿಷತ್ ಸದಸ್ಯರಾಗಿದ್ದು, ಪಕ್ಷವು ಸಂಸದೀಯ ಮಂಡಳಿಯನ್ನು ಹೊಂದಿದ್ದು, ಯಾರು ಎಲ್ಲಿಂದ ಸ್ಪರ್ಧಿಸಬೇಕು ಎಂಬುದನ್ನು ಅದು ನಿರ್ಧರಿಸುತ್ತದೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ಕಳೆದ 2017ರ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಜೆಪಿ ಸರ್ಕಾರ ಏನೆಲ್ಲ ಭರವಸೆಗಳನ್ನು ನೀಡಿತ್ತೋ ಅವುಗಳನ್ನೆಲ್ಲ ಪೂರೈಸಿದೆ. ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ರಾಜ್ಯ ಮಾದರಿಯಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಗಲಭೆ ನಡೆಯದೆ ದೀಪಾವಳಿ ಸೇರಿದಂತೆ ಎಲ್ಲ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಲಾಗಿದೆ ಎಂದು ಆದಿತ್ಯನಾಥ್ ಹೇಳಿದರು.

'ಉತ್ತರ ಪ್ರದೇಶವು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಿಕ್ಕಟ್ಟಿನೊಂದಿಗೆ ಹೋರಾಡುತ್ತಿತ್ತು ಮತ್ತು 2017 ರ ನಂತರ ರಾಜ್ಯವು ಇಂತಹ ಪರಿಸ್ಥಿತಿಯಿಂದ ಹೊರಬಂದಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವಿವಿಧ ಯೋಜನೆಗಳ ಪ್ರಯೋಜನಗಳು ತಲುಪಿವೆ' ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com