ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ: ಪ್ರಧಾನಿ ಮೋದಿ, ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಹಲವು ನಾಯಕರು ಭಾಗಿ
ಬಹು ನಿರೀಕ್ಷಿತ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ದೆಹಲಿಯಲ್ಲಿ ಆರಂಭವಾಗಿದ್ದು, ಪ್ರಧಾನಿ ಮೋದಿ, ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಹಲವು ನಾಯಕರು ಭಾಗಿಯಾಗಿದ್ದಾರೆ.
Published: 07th November 2021 02:02 PM | Last Updated: 07th November 2021 02:02 PM | A+A A-

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ನವದೆಹಲಿ: ಬಹು ನಿರೀಕ್ಷಿತ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ದೆಹಲಿಯಲ್ಲಿ ಆರಂಭವಾಗಿದ್ದು, ಪ್ರಧಾನಿ ಮೋದಿ, ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಹಲವು ನಾಯಕರು ಭಾಗಿಯಾಗಿದ್ದಾರೆ.
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯು ಭಾನುವಾರ ಆರಂಭಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮಾತನಾಡಲಿದ್ದಾರೆ. ಉತ್ತರಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆ ಕುರಿತು ಈ ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸುವ ಸಾಧ್ಯತೆ ಇದೆ.
BJP national executive meeting at Delhi | PM Modi was felicitated by BJP President JP Nadda and party's former national presidents for achieving the 100 crore COVID19 vaccination target pic.twitter.com/mK6C3YBWQD
— ANI (@ANI) November 7, 2021
ಪಕ್ಷದ ನಿಯಮಗಳ ಅನುಸಾರ, ರಾಷ್ಟ್ರೀಯ ಕಾರ್ಯಕಾರಣಿಯ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯಬೇಕು. ಆದರೆ, ದೇಶದಲ್ಲಿ ಕೋವಿಡ್‌ನಿಂದ ಉದ್ಭವಿಸಿದ್ದ ಪರಿಸ್ಥಿತಿಯಿಂದಾಗಿ ಈಗ ಬಹುತೇಕ ಎರಡು ವರ್ಷಗಳ ನಂತರ ಈ ಸಭೆಯು ನಡೆಯುತ್ತಿದೆ. ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರು, ಪ್ರಮುಖ ಮುಖಂಡರು, ಕೇಂದ್ರದ ಸಚಿವರು, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ವರ್ಚ್ಯುವಲ್ ಸ್ವರೂಪದಲ್ಲಿ ಸಭೆಯಲ್ಲಿ ಭಾಗವಹಿಸುವರು.
ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ರಾಜ್ಯದಿಂದ ಪಾಲ್ಗೊಂಡವರು
ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್, ಸಂಸದ ಉಮೇಶ್ ಜಾಧವ್, ಸಚಿವರಾದ ಕೆ.ಎಸ್.ಈಶ್ವರಪ್ಪ, ಆರ್ ಅಶೋಕ್, ಗೋವಿಂದ ಕಾರಜೋಳ, ಸಿ.ಎನ್.ಅಶ್ವತ್ಥನಾರಾಯಣ್, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಪಾಲ್ಗೊಂಡಿದ್ದರು.