ದೀಪಾವಳಿ ರಜೆಗಾಗಿ ಇಬ್ಬರು ಸೈನಿಕರ ನಡುವೆ ಗುಂಡಿನ ಚಕಮಕಿ: ನಾಲ್ವರು ಯೋಧರ ಸಾವು, ಮೂವರಿಗೆ ಗಾಯ

ದೀಪಾವಳಿ ರಜೆ ವಿಚಾರವಾಗಿ ಇಬ್ಬರು ಯೋಧರ ನಡುವೆ ನಡೆದ ಕಿತ್ತಾಟ ಹಾಗೂ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಸಾವನ್ನಪ್ಪಿರುವ ಘಟನೆ ತೆಲಂಗಾಣ-ಛತ್ತೀಸ್‌ಗಢ ಗಡಿ ಭಾಗದಲ್ಲಿ ಸೋಮವಾರ ನಡೆದಿದೆ.
ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದು.
ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದು.

ಛತ್ತೀಸ್ಗಢ: ದೀಪಾವಳಿ ರಜೆ ವಿಚಾರವಾಗಿ ಇಬ್ಬರು ಯೋಧರ ನಡುವೆ ನಡೆದ ಕಿತ್ತಾಟ ಹಾಗೂ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಸಾವನ್ನಪ್ಪಿರುವ ಘಟನೆ ತೆಲಂಗಾಣ-ಛತ್ತೀಸ್‌ಗಢ ಗಡಿ ಭಾಗದಲ್ಲಿ ಸೋಮವಾರ ನಡೆದಿದೆ.

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಲಿಂಗಂಪಲ್ಲಿ ಬೇಸ್ ಕ್ಯಾಂಪ್‌ನಲ್ಲಿ ದೀಪಾವಳಿ ರಜೆ ವಿಚಾರವಾಗಿ ಯೋಧರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಬಳಿಕ ಜಗಳ ತಾರಕ್ಕೇರಿದ್ದು, ಪರಸ್ಪರ ಗನ್‌ಗಳಿಂದ ಗುಂಡು ಹಾರಿಸಿದ್ದಾರೆ.

ಈ ವೇಳೆ ಸ್ಥಳದಲ್ಲಿದ್ದ ಯೋಧರಿಗೆ ಗುಂಡು ತಾಕಿದ್ದು, ಇಬ್ಬರು ಯೋಧರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇನ್ನೂ ಮೂವರು ಯೋಧರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ವರದಿಗಳು ತಿಳಿಸಿವೆ.

ಈ ನಡುವೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು, ಪ್ರಕರಣವನ್ನು ತನಿಖೆಗೆ ಆದೇಶಿಸಿದ್ದಾರೆಂದು ವರದಿಗಳು ತಿಳಿಸಿವೆ. ಇದೀಗ ಇಬ್ಬರೂ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com