ಮಧ್ಯಪ್ರದೇಶದಲ್ಲಿ ಅಗ್ನಿ ಅವಘಡ: ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 3 ಶಿಶುಗಳು ಸಾವು!

ಮಧ್ಯಪ್ರದೇಶದ ಸರ್ಕಾರಿ ಸ್ವಾಮ್ಯದ ಕಮಲಾ ನೆಹರು ಮಕ್ಕಳ ಆಸ್ಪತ್ರೆಯ ಐಸಿಯು ಇದ್ದ ವಿಭಾಗದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಕನಿಷ್ಟ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ.
ಭೋಪಾಲ್ ಆಸ್ಪತ್ರೆಯ ಹೊರಭಾಗದಲ್ಲಿ ನಿಂತಿರುವ ಜನತೆ
ಭೋಪಾಲ್ ಆಸ್ಪತ್ರೆಯ ಹೊರಭಾಗದಲ್ಲಿ ನಿಂತಿರುವ ಜನತೆ

ಭೋಪಾಲ್: ಮಧ್ಯಪ್ರದೇಶದ ಸರ್ಕಾರಿ ಸ್ವಾಮ್ಯದ ಕಮಲಾ ನೆಹರು ಮಕ್ಕಳ ಆಸ್ಪತ್ರೆಯ ಐಸಿಯು ಇದ್ದ ವಿಭಾಗದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಕನಿಷ್ಟ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. 

ಇತ್ತೀಚಿನ ವರದಿಯ ಪ್ರಕಾರ, ಅಗ್ನಿ ಅವಘಡ ಸಂಭವಿಸಿದಾಗ 50 ಮಕ್ಕಳು ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. 

ನ.08 ರಂದು ರಾತ್ರಿ ಈ ಘಟನೆ ನಡೆದಿದ್ದು, ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಈ ಬಗ್ಗೆ ಮಾತನಾಡಿದ್ದು, ಘಟನೆಯನ್ನು ದುರದೃಷ್ಟಕರ ಎಂದು ಹೇಳಿದ್ದಾರೆ.  ಪರಿಸ್ಥಿತಿಯನ್ನು ನಿಯಂತ್ರಿಸುವುದಕ್ಕೆ ಹಾಗೂ ರಕ್ಷಣಾ ಕಾರ್ಯಾಚರಣೆಗೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಬೇಕೆಂಬ ಸೂಚನೆಯನ್ನು ಅಧಿಕಾರಿಗಳಿಗೆ ನೀಡಿದ್ದಾರೆ.

ಅಗ್ನಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೂವರು ಮಕ್ಕಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಇದು ಅತ್ಯಂತ ನೋವಿನ ಸಂಗತಿ. ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದ್ದು, ಬೆಂಕಿಯ ಕೆನ್ನಾಲಿಗೆ ತಹಬದಿಗೆ ಬಂದಿದೆ ಎಂದು ಚೌಹಾಣ್ ಟ್ವೀಟ್ ಮಾಡಿದ್ದಾರೆ.

ಈ ಅಪಘಾತಕ್ಕೆ ಕಾರಣ ತಿಳಿಯಲು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ. ವೈದ್ಯಕೀಯ ವಿಭಾಗ ಹಾಗೂ ವೈದ್ಯಕೀಯ ಶಿಕ್ಷಣ ವಿಭಾಗದ ಎಸಿಎಸ್ ಮೊಹಮ್ಮದ್ ಸುಲೇಮಾನ್ ಈ ತನಿಖೆಯ ನೇತೃತ್ವ ವಹಿಸಲಿದ್ದಾರೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ರಾತ್ರಿ 9 ರ ವೇಳೆಗೆ ಅಗ್ನಿ ಅವಘಡ ಸಂಭವಿಸಿದ್ದು, 8-10 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ತಹಬದಿಗೆ ತರುವಲ್ಲಿ ಯಶಸ್ವಿಯಾಯಿತು. ಬೆಂಕಿ ಅವಘಡದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com