ಜಮ್ಮು-ಕಾಶ್ಮೀರ: ಶ್ರೀನಗರದ ಬೊರಿಕದಲ್ ನಲ್ಲಿ ಉಗ್ರರಿಂದ ಓರ್ವನ ಹತ್ಯೆ
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಯ ಪ್ರಕರಣವೊಂದು ಮತ್ತೆ ವರದಿಯಾಗಿದೆ. ನ.09 ರಂದು ಶ್ರೀನಗರದ ಬೋರಿಕದಲ್ ನಲ್ಲಿ ವ್ಯಕ್ತಿಯೋರ್ವನನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
Published: 09th November 2021 12:48 AM | Last Updated: 09th November 2021 01:41 PM | A+A A-

ಹತ್ಯೆ (ಸಾಂಕೇತಿಕ ಚಿತ್ರ)
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಯ ಪ್ರಕರಣವೊಂದು ಮತ್ತೆ ವರದಿಯಾಗಿದೆ. ನ.09 ರಂದು ಶ್ರೀನಗರದ ಬೋರಿಕದಲ್ ನಲ್ಲಿ ವ್ಯಕ್ತಿಯೋರ್ವನನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಮೃತ ವ್ಯಕ್ತಿಯನ್ನು ಮೊಹಮ್ಮದ್ ಇಬ್ರಾಹಿಮ್ ಖಾನ್ ಎಂದು ಗುರುತಿಸಲಾಗಿದ್ದು, ತೀವ್ರವಾಗಿ ಗಾಯಗೊಂಡ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ವೇಳೆ ಆತ ಕೊನೆಯುಸಿರೆಳೆದಿದ್ದಾರೆ.
ಪೊಲೀಸ್ ಇಲಾಖೆ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ವೇಳೆ ಆತ ಮೃತಪಟ್ಟಿದ್ದಾನೆ ಎಂದು ಹೇಳಿದೆ.
ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಶೋಧಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಇದಕ್ಕೂ ಮುನ್ನ ಭಾನುವಾರದಂದು ರಾತ್ರಿ ಉಗ್ರರು ಓರ್ವ ಪೊಲೀಸ್ ಪೇದೆಯನ್ನು ಹತ್ಯೆ ಮಾಡಿದ್ದರು.