'ನವಾಬ್ ಮಲಿಕ್ ನಮ್ಮ ವಿರುದ್ಧ ಸುಳ್ಳು-ಅವಹೇಳನಕಾರಿ ಆರೋಪ ಮಾಡುತ್ತಿದ್ದಾರೆ': ಸಮೀರ್ ವಾಂಖೆಡೆ ತಂದೆ ಪೊಲೀಸರಿಗೆ ದೂರು

ಮಹಾರಾಷ್ಟ್ರ ಸರ್ಕಾರದ ಎನ್ ಸಿಪಿ ಸಚಿವ ನವಾಬ್ ಮಲಿಕ್ ಅವರು ಎನ್ ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಮಾಡುತ್ತಿರುವ ಆರೋಪ ನಿಲ್ಲುತ್ತಿಲ್ಲ. ಈ ಬಗ್ಗೆ ಇದೀಗ ಸಮೀರ್ ವಾಂಖೆಡೆಯವರ ತಂದೆ ಧ್ಯಾನದೇವ್ ವಾಂಖೆಡೆ ಪೊಲೀಸರಿಗೆ ದೂರು ನೀಡಿದ್ದಾರೆ. 
ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಮತ್ತು ಸಚಿವ ನವಾಬ್ ಮಲಿಕ್
ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಮತ್ತು ಸಚಿವ ನವಾಬ್ ಮಲಿಕ್

ಮುಂಬೈ: ಮಹಾರಾಷ್ಟ್ರ ಸರ್ಕಾರದ ಎನ್ ಸಿಪಿ ಸಚಿವ ನವಾಬ್ ಮಲಿಕ್ ಅವರು ಎನ್ ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಮಾಡುತ್ತಿರುವ ಆರೋಪ ನಿಲ್ಲುತ್ತಿಲ್ಲ. ಈ ಬಗ್ಗೆ ಇದೀಗ ಸಮೀರ್ ವಾಂಖೆಡೆಯವರ ತಂದೆ ಧ್ಯಾನದೇವ್ ವಾಂಖೆಡೆ ಪೊಲೀಸರಿಗೆ ದೂರು ನೀಡಿದ್ದಾರೆ. 

ಎನ್ ಸಿಪಿ ಸಚಿವ ನವಾಬ್ ಮಲಿಕ್ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಿರುವ ಧ್ಯಾನದೇವ್ ವಾಂಖೆಡೆ, ತಮ್ಮ, ತಮ್ಮ ಕುಟುಂಬ ಸದಸ್ಯರ ವಿರುದ್ಧ ಮತ್ತು ತಮ್ಮ ಜಾತಿ ವಿರುದ್ಧ ಸುಳ್ಳು ಮತ್ತು ನಿಂದನಕಾರಿ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಂಬೈಯ ಒಶಿವಾರ ವಿಭಾಗೀಯ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ನಿನ್ನೆ ದೂರು ನೀಡಿರುವ ಧ್ಯಾನದೇವ್ ವಾಂಖೆಡೆ ಸಚಿವ ನವಾಬ್ ಮಲಿಕ್ ವಿರುದ್ಧ ಎಸ್ ಸಿ/ಎಸ್ ಟಿ ಕಾಯ್ದೆಯಡಿ ಎಫ್ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಎನ್‌ಸಿಪಿ ನಾಯಕ ಮಲಿಕ್ ತನ್ನ ಮತ್ತು ತಮ್ಮ ಕುಟುಂಬ ಸದಸ್ಯರು ವಿರುದ್ಧ, ತಮ್ಮ ಜಾತಿಯ ವಿರುದ್ಧ ವಿವಿಧ ಮಾಧ್ಯಮ ವೇದಿಕೆಗಳಲ್ಲಿ "ಸುಳ್ಳು ಮತ್ತು ಅವಹೇಳನಕಾರಿ" ಟೀಕೆಗಳನ್ನು ಮಾಡಿದ್ದಾರೆ. ನಾವು ಪರಿಶಿಷ್ಟ ಜಾತಿಗೆ ಸೇರಿದ ಮಹಾರ್ ಸಮುದಾಯಕ್ಕೆ ಸೇರಿದವರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಚಿವ ನವಾಬ್ ಮಲಿಕ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 503 (ಅಪರಾಧ ಬೆದರಿಕೆ) ನಡಿ ಎಫ್‌ಐಆರ್ ದಾಖಲಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಮಲಿಕ್ ತನ್ನ ವೈಯಕ್ತಿಕ ದ್ವೇಷದ ಕಾರಣದಿಂದ ತನ್ನ ಮಗಳು ಯಾಸ್ಮೀನ್ ಅವರನ್ನು ಆನ್‌ಲೈನ್‌ನಲ್ಲಿ ಹಿಂಬಾಲಿಸುವ ಮಟ್ಟಕ್ಕೆ ಹೋಗಿದ್ದಾರೆ. ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮುಂತಾದ ಸಾಮಾಜಿಕ ಮಾಧ್ಯಮ ಖಾತೆಗಳಿಂದ ಆಕೆಯ ವೈಯಕ್ತಿಕ ಫೋಟೋಗಳನ್ನು ಅಕ್ರಮವಾಗಿ ಬಳಸಿ ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮಾಲ್ಡೀವ್ಸ್‌ನಲ್ಲಿದ್ದಾಗ ತಮ್ಮ ಮಗಳು ಮತ್ತು ಕುಟುಂಬದ ಸದಸ್ಯರ ವಿರುದ್ಧ ಸುಲಿಗೆಯಲ್ಲಿ ತೊಡಗಿದ್ದಾರೆ ಎಂದು ಆಧಾರರಹಿತ ಆರೋಪ ಮಾಡಿದ್ದರು. ಇದೀಗ, ಸಚಿವರು ಬೆದರಿಕೆ ತಂತ್ರಗಳನ್ನು ಬಳಸುತ್ತಿದ್ದಾರೆ. ಅವರು ಶಿಕ್ಷೆಗೊಳಗಾಗುವ ಸಾಧ್ಯತೆಯಿರುವ ತನ್ನ ಅಳಿಯ (ಸಮೀರ್ ಖಾನ್) ಪ್ರಕರಣದ ತನಿಖೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ವಾಂಖೆಡೆ ದೂರಿನಲ್ಲಿ ಆರೋಪಿಸಿದ್ದಾರೆ. 

ಸಚಿವ ನವಾಬ್ ಮಲಿಕ್ ಅವರ ಅಳಿಯನನ್ನು ಈ ವರ್ಷದ ಜನವರಿಯಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿ ಸೆಪ್ಟೆಂಬರ್ ನಲ್ಲಿ ಜಾಮೀನು ನೀಡಲಾಗಿತ್ತು. ಮಲಿಕ್ ತನ್ನ ಎಲ್ಲಾ ಅಧಿಕಾರಗಳನ್ನು ಬಳಸಿಕೊಂಡು ತನ್ನ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಸುಳ್ಳು, ನಿಂದನಕಾರಿ ಆರೋಪ ಮಾಡುತ್ತಿದ್ದಾರೆ ಎಂದು ಧ್ಯಾನದೇವ್ ವಾಂಖೆಡೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com