ಉತ್ತರ ಪ್ರದೇಶ ಚುನಾವಣೆಯಲ್ಲಿ ಸೋತರೆ ಸಿಎಂ ಯೋಗಿ ಆದಿತ್ಯನಾಥ್ 'ಸನ್ಯಾಸಿ'ಯಾಗುತ್ತಾರೆ: ಬಿಜೆಪಿ ಮಾಜಿ ಶಾಸಕ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋತರೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮತ್ತೆ ಸನ್ಯಾಸಿ ಆಗುತ್ತಾರೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಹಾಗೂ ಮಾಜಿ ಶಾಸಕ ರಾಮ್ ಇಕ್ಬಾಲ್ ಸಿಂಗ್...
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್

ಬಲಿಯಾ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋತರೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮತ್ತೆ ಸನ್ಯಾಸಿ ಆಗುತ್ತಾರೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಹಾಗೂ ಮಾಜಿ ಶಾಸಕ ರಾಮ್ ಇಕ್ಬಾಲ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ.

ಯೋಗಿ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಅವರು ಮತ್ತೆ ಸನ್ಯಾಸಿಯಾಗಲಿದ್ದಾರೆ ಎಂದು ಬಿಜೆಪಿ ನಾಯಕ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

"ನಾನು 'ತೇಜಾಬ್'(ಆಮ್ಲ) 'ಅಮೃತ' (ಮಕರಂದ) ಎಂದು ಕರೆಯಲು ಸಾಧ್ಯವಿಲ್ಲ," ಅವರು ಗೋರಖ್‌ಪುರದ ಗೋರಖನಾಥ ದೇವಾಲಯದ ಪ್ರಧಾನ ಅರ್ಚಕರೂ ಆಗಿದ್ದರು ಎಂದು ಉಲ್ಲೇಖಿಸಿದ ಇಕ್ಬಾಲ್ ಸಿಂಗ್ ಅವರು, ಯೋಗಿ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಅವರು ತಕ್ಷಣವೇ ಕೋಪಗೊಂಡು ಸಾಧು ಆಗುತ್ತಾರೆ ಎಂದು ಹೇಳಿದ್ದಾರೆ.

ಸುಹಲ್‌ದೇವ್ ಭಾರತೀಯ ಸಮಾಜ ಪಕ್ಷದ ಅಧ್ಯಕ್ಷ ಓಂ ಪ್ರಕಾಶ್ ರಾಜ್‌ಭರ್ ಅವರನ್ನು ಹೊಗಳಿದ ಸಿಂಗ್, ಅವರು "ರಾಜಭರ್ ಸಮುದಾಯದ ಏಕೈಕ ನಾಯಕ" ಎಂದಿದ್ದಾರೆ.

ಇಕ್ಬಾಲ್ ಸಿಂಗ್ ಸಿಂಗ್ ಅವರು ಈ ಹಿಂದೆಯೂ ರಾಜ್ಯ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಯೋಗಿ ಸರ್ಕಾರದ ಕಾರ್ಯನಿರ್ವಹಣೆಯ ಬಗ್ಗೆ ಪ್ರಶ್ನಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com