ಚೆನ್ನೈನಲ್ಲಿ ನವೆಂಬರ್ 10 ಮತ್ತು 11 ರಂದು ಭಾರೀ ಮಳೆ, ರೆಡ್ ಅಲರ್ಟ್ ಘೋಷಿಸಿದ ಐಎಂಡಿ

ಕಳೆದ ಕೆಲವು ದಿನಗಳಿಂದ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ನಿರಂತರ ಭಾರಿ ಮಳೆಯಾಗುತ್ತಿದ್ದು, ಈ ವಾರಾಂತ್ಯದಲ್ಲಿ ಚೆನ್ನೈ ಭಾರಿ ಮಳೆಯಿಂದ ತತ್ತರಿಸಿದೆ. ಈ ಮಧ್ಯೆ ಭಾರತೀಯ ಹವಾಮಾನ...
ಚೆನ್ನೈ
ಚೆನ್ನೈ

ಚೆನ್ನೈ: ಕಳೆದ ಕೆಲವು ದಿನಗಳಿಂದ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ನಿರಂತರ ಭಾರಿ ಮಳೆಯಾಗುತ್ತಿದ್ದು, ಈ ವಾರಾಂತ್ಯದಲ್ಲಿ ಚೆನ್ನೈ ಭಾರಿ ಮಳೆಯಿಂದ ತತ್ತರಿಸಿದೆ. ಈ ಮಧ್ಯೆ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಬುಧವಾರ ಚೆನ್ನೈನಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಚೆನ್ನೈ ಮತ್ತು ಅದರ ನೆರೆಹೊರೆಯ ಜಿಲ್ಲೆಗಳು ಬುಧವಾರ ಮತ್ತು ಗುರುವಾರ ಬಂಗಾಳ ಕೊಲ್ಲಿಯಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತದಿಂದ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕಡಲೂರು ಮತ್ತು ಚೆನ್ನೈ ನಡುವಿನ ಪ್ರದೇಶದಲ್ಲಿ ಬುಧವಾರದಿಂದ ಗುರುವಾರ ಬೆಳಗಿನ ತನಕ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ತಮಿಳುನಾಡಿನ ಕರಾವಳಿ ಪ್ರದೇಶಗಳಲ್ಲಿ ಮುಂದಿನ 36 ಗಂಟೆಗಳಿಂದ 48 ಗಂಟೆಗಳ ಕಾಲ ತೀವ್ರ ಕಟ್ಟೆಚ್ಚರ ವಹಿಸಬೇಕಾಗಿದೆ, ಏಕೆಂದರೆ ಕೆಲವು ಸ್ಥಳಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಪ್ರದೇಶ ಶೀಘ್ರದಲ್ಲೇ ವಾಯುಭಾರ ಕುಸಿತವಾಗಿ ಕೇಂದ್ರೀಕೃತವಾಗಿದ್ದು, ಮುಂದಿನ ಎರಡು ದಿನಗಳ ಕಾಲ ತಮಿಳುನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com