ಚೆನ್ನೈನಲ್ಲಿ ಭಾರಿ ಮಳೆ: ಅಸ್ವಸ್ಥಗೊಂಡಿದ್ದ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತು ಸಾಗಿದ ಮಹಿಳಾ ಪೊಲೀಸ್, ವಿಡಿಯೋ ವೈರಲ್
ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಸುರಿಯುತ್ತಿರುವ ಭಾರಿ ಮಳೆ ಅಲ್ಲಿನ ಜನಜೀವನವನ್ನು ತೀವ್ರ ಅಸ್ಥವ್ಯಸ್ಥಗೊಳಿಸಿದ್ದು, ಸತತ ಮಳೆಯಿಂದಾಗಿ ಅಸ್ವಸ್ಥಗೊಂಡಿದ್ದ ವ್ಯಕ್ತಿಯೊಬ್ಬರನ್ನು ಅಲ್ಲಿನ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಹೆಗಲ ಮೇಲೆ ಹೊತ್ತು ಸಾಗಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.
Published: 11th November 2021 03:55 PM | Last Updated: 11th November 2021 07:52 PM | A+A A-

ಅಸ್ವಸ್ಥ ವ್ಯಕ್ತಿಯನ್ನು ಹೊತ್ತು ಸಾಗಿದ ಮಹಿಳಾ ಪೊಲೀಸ್ ಅಧಿಕಾರಿ
ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಸುರಿಯುತ್ತಿರುವ ಭಾರಿ ಮಳೆ ಅಲ್ಲಿನ ಜನಜೀವನವನ್ನು ತೀವ್ರ ಅಸ್ಥವ್ಯಸ್ಥಗೊಳಿಸಿದ್ದು, ಸತತ ಮಳೆಯಿಂದಾಗಿ ಅಸ್ವಸ್ಥಗೊಂಡಿದ್ದ ವ್ಯಕ್ತಿಯೊಬ್ಬರನ್ನು ಅಲ್ಲಿನ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಹೆಗಲ ಮೇಲೆ ಹೊತ್ತು ಸಾಗಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.
ಹೌದು.. ಮಳೆ ಪೀಡಿತ ಚೆನ್ನೈನ ಟಿಪಿ ಚತ್ರಂ ಸ್ಮಶಾನದ ಬಳಿ ಈ ಘಟನೆ ನಡೆದಿದ್ದು, ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸೂರಿಲ್ಲದೇ ನೆಂದು ಅಸ್ವಸ್ಥನಾಗಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಪೊಲೀಸ್ ಅಧಿಕಾರಿ ರಾಜೇಶ್ವರಿ ಅವರ ಸಹಾಯದಿಂದ ಆಸ್ಪತ್ರೆಗೆ ಸೇರಿಸಲಾಗಿದೆ.
ಇದನ್ನೂ ಓದಿ: ಚೆನ್ನೈನಲ್ಲಿ ಭಾರಿ ಮಳೆ-ಗಾಳಿ ಅವಾಂತರ: ಸಂಜೆ 6ವರೆಗೂ ವಿಮಾನಗಳ ಆಗಮನ ರದ್ದು
ಪ್ರವಾಹ ಪೀಡಿತ ಪ್ರದೇಶದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ರಾಜೇಶ್ವರಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಮಳೆಯಿಂದಾಗಿ ಅಲ್ಲಿ ಮರವೊಂದು ಬಿದ್ದಿದ್ದು, ಮರವನ್ನು ತೆರವುಗೊಳಿಸುವಾಗ ಅಲ್ಲೇ ಪಕ್ಕದಲ್ಲಿ ಟಿಪಿ ಚತ್ರಂ ಸ್ಮಶಾನದ ಬಳಿ ವ್ಯಕ್ತಿಯೋರ್ವ ಅಸ್ವಸ್ಥನಾಗಿ ಬಿದ್ದಿದ್ದನ್ನು ಅವರು ಗಮನಿಸಿದ್ದಾರೆ. ಕೂಡಲೇ ಸ್ಥಳೀಯರ ನೆರವಿನಿಂದ ಆತನನ್ನು ತಮ್ಮ ಭುಜದ ಮೇಲೆ ಹಾಕಿಕೊಂಡು ಆಟೋದಲ್ಲಿ ಹಾಕಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಅಲ್ಲದೆ ಅಸ್ವಸ್ಥ ವ್ಯಕ್ತಿಯೊಂದಿಗೆ ಮತ್ತೋರ್ವ ಸ್ಥಳೀಯನನ್ನು ಕಳುಹಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಇದನ್ನೂ ಓದಿ: ಅವ್ಯಾಹತ ಮಳೆಗೆ ತತ್ತರಿಸಿ ಹೋದ ಚೆನ್ನೈ: ರಸ್ತೆಗಳಿಗೆ ಹಾನಿ, ಸಂಚಾರಕ್ಕೆ ನಿರ್ಬಂಧ, ಜನಜೀವನ ಅಸ್ತವ್ಯಸ್ತ
ಈ ವಿಡಿಯೋವನ್ನು ಸ್ಥಳೀಯರು ಚಿತ್ರೀಕರಿಸಿದ್ದು, ರಾಜೇಶ್ವರಿ ಅವರ ಕಾರ್ಯಕ್ಕೆ ಎಲ್ಲಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.